ಮುಖ್ಯ ಸುದ್ದಿ
CM; ಅ.17ರಂದು ವಾಲ್ಮೀಕಿ ಜಯಂತಿ | ಸಿಎಂ ಸಿದ್ದರಾಮಯ್ಯ ಭಾಗೀ
CHITRADURGA NEWS | 15 OCTOBER 2024
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇದೇ ಅ.17 ರಂದು ಮಧ್ಯಾಹ್ನ 12 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ(Shri Maharshi Valmiki) ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕ್ಲಿಕ್ ಮಾಡಿ ಓದಿ: Bhadra; ಭದ್ರಾದಿಂದ ಕೆರೆಗಳಿಗೆ ನೀರು ತುಂಬಿಸಲು 105 ಕೋಟಿ ವೆಚ್ಚದ ಮೋಟಾರ್ | ಶಾಸಕ ಎಂ.ಚಂದ್ರಪ್ಪ
ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಘನ ಉಪಸ್ಥಿತಿ ವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಗೌರವಾನ್ವಿತ ಆಹ್ವಾನಿತರಾಗಿ ಸಂಸದ ಗೋವಿಂದ ಎಂ ಕಾರಜೋಳ ಭಾಗವಹಿಸುವರು. ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಕರ್ನಾಟಕ ರಾಜ್ಯ ವಕ್ಷ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು,
ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ವಾಲ್ಮೀಕಿ ನಾಯಕ ಸಂಘದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ ಹಾಗೂ ಚಿತ್ರದುರ್ಗ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಎಲ್ಲಾ ಗೌರವಾನ್ವಿತ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ಗಣ್ಯರು, ಸಮಾಜದ ಮುಖಂಡರು ಭಾಗವಹಿಸುವರು.
ಕ್ಲಿಕ್ ಮಾಡಿ ಓದಿ: APMC; ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 15 | ಇಂದಿನ ಹತ್ತಿ ರೇಟ್
ಹೊಸದುರ್ಗ ತಾಲ್ಲೂಕು ಕಿಟ್ಟದಾಳು ಕಲ್ಪತರು ಸಂಯುಕ್ತ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಡಾ. ಆಂಜನೇಯ ಉರ್ತಾಳ್ ಉಪನ್ಯಾಸ ನೀಡುವರು.
ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಿಂದ ಮದಕರಿ ನಾಯಕ ವೃತ್ತದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ ತಿಳಿಸಿದ್ದಾರೆ.