CHITRADURGA NEWS | 07 OCTOBER 2025
ಹೊಳಲ್ಕೆರೆ: ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ನಾಯಕ ಜನಾಂಗದವರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಕರೆ ನೀಡಿದರು.

ಇದನ್ನೂ ಓದಿ: ಜಿಲ್ಲಾಡಳಿತ 30 ಎಕರೆ ಜಮೀನು ನೀಡಿದರೆ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣ | MLC ಕೆ.ಎಸ್.ನವೀನ್ ಭರವಸೆ
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಹರ್ಷಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಸ್ವಾಮಿ ಮೀಸಲಾತಿ ಹೆಚ್ಚಳಕ್ಕಾಗಿ ಬೆಂಗಳೂರಿನ ಉದ್ಯಾನವನದಲ್ಲಿ ಅಹೋರಾತ್ರಿ ಸತ್ಯಾಗ್ರಹ ನಡೆಸಿದಾಗ ಅಂದಿನ ಮುಖ್ಯಮಂತ್ರಿ ಬಸವರಾಜ್‍ಬೊಮ್ಮಾಯಿ ಶೇ.3 ರಷ್ಟಿದ್ದ ಮೀಸಲಾತಿಯನ್ನು 7.5 ಕ್ಕೆ ಹೆಚ್ಚಿಸಿದರು.
ತಾಲ್ಲೂಕಿನಾದ್ಯಂತ 150 ಸ್ವಸಹಾಯ ಸಂಘಗಳಿಗೆ ತಲಾ ಎರಡು ಲಕ್ಷ ರೂ.ಗಳನ್ನು ಕೊಡಿಸಿದ್ದೇನೆ. ಇದರಿಂದ ಮಹಿಳೆಯರು ಸ್ವಾವಲಂಭಿಗಳಾಗಿ ಬದುಕಲು ನೆರವಾಗಿದೆ ಎಂದು ಹೇಳಿದರು.
ಮಹಾಭಾರತ, ರಾಮಾಯಣ ಕಾಲದಿಂದಲೂ ನಾಯಕ ಸಮಾಜ ತುಳಿತಕ್ಕೊಳಗಾಗುತ್ತ ಬರುತ್ತಿದೆ. ಏಕಲವ್ಯ ದ್ರೋಣಾಚಾರ್ಯರಿಗೆ ಗುರು ಕಾಣಿಕೆಯಾಗಿ ಹೆಬ್ಬೆರಳನ್ನೇ ನೀಡಿದ ಇತಿಹಾಸವುಳ್ಳ ಸಮಾಜ ನಿಮ್ಮದು. 91 ರಲ್ಲಿ ನಾಯಕ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಯಿತು.
ಇದನ್ನೂ ಓದಿ: ವಾಲ್ಮೀಕಿ ಜಯಂತಿ | ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ಸಡಗರ-ಸಂಭ್ರಮದ ಭವ್ಯ ಮೆರವಣಿಗೆ
ಉಪಕಾರ ಮಾಡಿದವರನ್ನು ನೆನಪಿಸಿಕೊಳ್ಳುವುದು ನಿಜವಾದ ಮನುಷ್ಯತ್ವ. ವಾಲ್ಮೀಕಿ ಸಮಾಜಕ್ಕೆ ದೊಡ್ಡ ಕಲ್ಯಾಣ ಮಂಟಪ ಕಟ್ಟಿಸಿಕೊಟ್ಟಿದ್ದೇನೆ. ಬೊಮ್ಮನಕಟ್ಟೆಯಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಹೊಳಲ್ಕೆರೆ ತಹಶೀಲ್ದಾರ್ ವಿಜಯಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಸುರೇಗೌಡ್ರು, ಪುರಸಭೆ ಸದಸ್ಯರುಗಳಾದ ಆರ್.ಎ.ಅಶೋಕ್, ಪಿ.ಹೆಚ್.ಮುರುಗೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಲೋಹಿತ್, ರಂಗಸ್ವಾಮಿ, ಕುಬೇರಪ್ಪ, ಡಿ.ಸಿ.ಮೋಹನ್, ಅಜ್ಜಯ್ಯ, ಮಂಜಣ್ಣ, ರವಿಕುಮಾರ್, ಹನುಮಂತಣ್ಣ, ಸಮಾಜದ ಮುಖಂಡರುಗಳು ಜಯಂತಿಯಲ್ಲಿ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
