
ಚಿತ್ರದುರ್ಗ ನ್ಯೂಸ್.ಕಾಂ
ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದಿಂದ 96 ಜನ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ ಹೇಳಿದರು.
‘ಡಿ.24ರಂದು ಬೆಳಿಗ್ಗೆ 10.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಈ ವೇಳೆ ಮಾಜಿ ಸಂಸದ ಎನ್.ವೈ.ಹನುಮಂತಪ್ಪ ಅವರಿಗೆ 2013ನೇ ಸಾಲಿನ ಜೀವಮಾನ ಸಾಧನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಜತೆಗೆ ಸಮಾಜದ ಸಾಧಕರಾದ ನಿವೃತ್ತ ಡಿಐಜಿ ಎಂ.ಎನ್.ನಾಗರಾಜ್, ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಎಂ.ಎನ್.ಅಹೋಬಲಪತಿ ಹಾಗೂ ಉದ್ಯಮಿ ಪಿ.ವಿ.ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಗುತ್ತದೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಸಂಘದಿಂದ ಕಳೆದ 12 ವರ್ಷಗಳಿಂದ ಸಮಾಜದ ಸಾಧಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸಿ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಎಸ್‌ಡಬ್ಲ್ಯೂ, ಇಂಜಿನಿಯರಿಂಗ್, ಎಂಬಿಬಿಎಸ್ ಇತರೆ ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪಿಎಚ್‌ಡಿ ಪದವಿ ಪಡೆದ ನಾಯಕ ಸಮಾಜದ ಪ್ರತಿಭಾವಂತರನ್ನು ಅಭಿನಂದಿಸಲು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಇದರಲ್ಲಿ 96 ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ’ ಎಂದರು.
‘ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜು ಮಾತನಾಡಿ, ‘ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು’ ಎಂದು ಕೋರಿದರು.
ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ಸಂಘದ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು, ಖಜಾಂಚಿ ಎಸ್.ಬಿ.ರವಿಶಂಕರ್, ಉಪಾಧ್ಯಕ್ಷ ಜೆ.ಎಸ್.ರವಿಕುಮಾರ್, ಜಂಟಿ ಕಾರ್ಯದರ್ಶಿಗಳಾದ ಕೆ.ನಾಗರಾಜ್, ಎಚ್.ತಿಪ್ಪಯ್ಯ, ಸಹಾಯಕ ಎಂಜಿನಿಯರ್ ಬಸವರಾಜ ಟಿ.ಗೊರವರ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
