CHITRADURGA NEWS | 07 AUGUST 2026
ಚಿತ್ರದುರ್ಗ: ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯ ಶಿಕ್ಷಣ ಸಹಕಾರಿಯಾಗುತ್ತದೆ ಎಂದು ಡಯಟ್‌ನ ಉಪನ್ಯಾಸಕಿ ಶಿವಲೀಲ ಹೇಳಿದರು.
ಇದನ್ನೂ ಓದಿ: ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
ನಗರದ ಮಲ್ಲಾಪುರ ಸ.ಹಿ.ಪ್ರಾ.ಶಾಲೆಗೆ ಗುರುವಾರ ಭೇಟಿ ನೀಡಿ ದ್ವಿಭಾಷಾ ತರಗತಿ, ಮೌಲ್ಯ ಶಿಕ್ಷಣ ಅನುಷ್ಟಾನ ಸಂಬಂಧ ಬೋಧನಾ ಕಲಿಕಾ ಪ್ರಕ್ರಿಯೆ ಪರಿಶೀಲಿಸಿ ಮಾತನಾಡಿದರು.
ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಜೀವನ ಮೌಲ್ಯಗಳನ್ನು ಕಲಿಸಿದರೆ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ನಿರ್ಮಾಣಗೊಳ್ಳುತ್ತಾರೆ. ಇದರಿಂದ ಸುಸ್ಥಿರ ಜೀವನ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ. ಶಿಕ್ಷಕರು ಕ್ರಿಯಾಶೀಲತೆಯಿಂದ ಇಲಾಖೆಯ ಮಾರ್ಗದರ್ಶನದಂತೆ ಶೈಕ್ಷಣಿಕ ಚಟುವಟಿಕೆಗಳನ್ನು ನಿರ್ವಹಿಸಬೇಕು. ಸದರಿ ಶಾಲೆಯಲ್ಲಿ ಬೋಧನಾ ಕಲಿಕಾ ಪ್ರಕ್ರಿಯೆ, ಶಾಲಾ ದಾಖಲೆಗಳ ನಿರ್ವಹಣೆ ಉತ್ತಮವಾಗಿ ನಿರ್ವಹಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಉಪನ್ಯಾಸಕ ಎಸ್.ಬಸವರಾಜು ಮಾತನಾಡಿ, ವಿದ್ಯಾರ್ಥಿಗಳಿಗೆ ಪುಸ್ತಕದ ಜ್ಞಾನದ ಜತೆಗೆ ಭವಿಷ್ಯದ ಜೀವನಕ್ಕೆ ಪೂರಕವಾದ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ. ವಿಜ್ಞಾನ ತಂತ್ರಜ್ಞಾನ ವೇಗವಾಗಿ ಬೆಳೆದಿರುವ ಪ್ರಸ್ತುತ ಸಂದರ್ಭದಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಕಲಿಕೆ ಮುಖ್ಯವಾಗಿದೆ. ಮಕ್ಕಳಲ್ಲಿ ಭಾವನಾತ್ಮಕ ಸಮತೋಲನ, ಆತ್ಮವಿಶ್ವಾಸ, ಒತ್ತಡ ನಿವಾರಣೆ, ಸಂವೇದನಾಶೀಲತೆ ಬೆಳೆಸಿಕೊಳ್ಳಲು ಮೌಲ್ಯಗಳು ಅಗತ್ಯ ಎಂದರು.
ಡಿಎಸ್‌ಇಆರ್‌ಟಿ(ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ) ವತಿಯಿಂದ ಗೌರವ, ಪ್ರಾಮಾಣಿಕತೆ ಮತ್ತು ನಿಷ್ಠೆ, ಭಾವನಾತ್ಮಕತೆ ಮತ್ತು ಸ್ಥಿತಿಸ್ಥಾಪಕತ್ವ, ಅನುಭೂತಿ, ವೈವಿಧ್ಯತೆ, ಸಮತೆ ಮತ್ತು ಒಳಗೊಳ್ಳುವಿಕೆ, ಜೆಂಡರ್ ಸಮಾನತೆ, ವೈಜ್ಞಾನಿಕ ಮನೋಭಾವ ಮತ್ತು ಸೃಜನಾತ್ಮಕತೆ, ಸುಸ್ಥಿರ ಜೀವನ ಪದ್ಧತಿ ಮತ್ತು ಪರಿಸರ ಜಾಗೃತಿ, ನಾಗರಿಕ ಜವಾಬ್ದಾರಿ, ಸುರಕ್ಷತೆ 10 ಮೌಲ್ಯಗಳನ್ನು ಒಳಗೊಂಡಿರುವ ಚಟುವಟಿಕೆ ಪುಸ್ತಕಗಳನ್ನು ಸರ್ಕಾರಿ ಶಾಲೆಗಳ 1 ರಿಂದ 10 ನೇ ತರಗತಿವರೆಗೆ ನೀಡಲಾಗಿದೆ.
ಇದನ್ನೂ ಓದಿ: ಚಳ್ಳಕೆರೆಯಲ್ಲಿ ತೀವ್ರ ಬರದ ಬರೆ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
ಶಾಲೆಗಳಲ್ಲಿ ಶಿಕ್ಷಕರು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವ-ಅರಿವು, ಆತ್ಮವಿಶ್ವಾಸ, ಸಾಮರಸ್ಯ, ಸಹಾನುಭೂತಿ, ಒಳಗೊಳ್ಳುವಿಕೆ, ಸೃಜನಶೀಲತೆ, ಪರಿಸರ ಕಾಳಜಿ ಬೆಳೆಸಬೇಕು ಎಂದು ತಿಳಿಸಿದರು.
ಮುಖ್ಯ ಶಿಕ್ಷಕಿ ರತ್ನಮ್ಮ, ಸಲೀಮಾ, ಶಿಲ್ಪ, ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

