
CHITRADURGA NEWS | 19 AUGUST 2024
ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ದಿನದಿಂದ ದಿನಕ್ಕೆ ಒಳಹರಿವಿನ (VV Sagara Inflow) ಪ್ರಮಾಣ ಹೆಚ್ಚಾಗುತ್ತಿದೆ.
ಆಗಸ್ಟ್ 19 ರ ಸೋಮವಾರ ಬೆಳಿಗ್ಗೆ ನಡೆಸಿದ ಮಾಪನದ ಪ್ರಕಾರ ವಿವಿ ಸಾಗರಕ್ಕೆ ಬರೋಬ್ಬರಿ 1,270 ಕ್ಯೂಸೆಕ್ ನೀರು ಹರಿದು ಬಂದಿದೆ.
ಕ್ಲಿಕ್ ಮಾಡಿ ಓದಿ: ಪ್ರತಿಭಟನೆ ಬದಲು ಪೊಲೀಸರಿಗೆ ದೂರು ನೀಡಿ| ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
30 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 20.08 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 123 ಅಡಿವರೆಗೆ ತುಂಬಿದ್ದ ಜಲಾಶಯದಲ್ಲಿ 24.54 ಟಿಎಂಸಿ ನೀರಿತ್ತು. ಭದ್ರಾ ಜಲಾಶಯದಿಂದಲೂ ಪ್ರತಿ ದಿನ 700 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರ ಜೊತೆಗೆ ದಿನೇ ದಿನೇ ಮಳೆಯೂ ಹೆಚ್ಚಾಗಿದೆ. ವಿವಿ ಸಾಗರ ಸೇರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ವೇದಾವತಿ ನದಿಯಲ್ಲೂ ನೀರು ಹರಿಯುತ್ತಿರುವುದರಿಂದ ಈ ವರ್ಷ ವಿವಿ ಸಾಗರ ಜಲಾಶಯ ಭರ್ತಿಯಾಗುವ ಲಕ್ಷಣಗಳು ಕಾಣಿಸುತ್ತಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
