
CHITRADURGA NEWS | 04 OCTOBER 2024
ಚಿತ್ರದುರ್ಗ: ಜಿಲ್ಲೆಯ ಕೆಲ ಭಾಗ ಹಾಗೂ ಭದ್ರಾ ಜಲಾಶಯ, ಎತ್ತಿನಹೊಳೆಯಿಂದ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ವಾಣಿವಿಲಾಸ ಸಾಗರ ಜಲಾಶಯದ ಒಳಹರಿವು ಹೆಚ್ಚಾಗಿದೆ.
ಭದ್ರಾ ಜಲಾಶಯದಿಂದ ಪ್ರತಿ ದಿನ 500 ರಿಂದ 650 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಆದರೆ, ಅಕ್ಟೋಬರ್ 04 ರಂದು ನಡೆಸಿದ ಮಾಪನದ ವೇಳೆ ಒಳಹರಿವಿನ ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿದೆ.
ಕ್ಲಿಕ್ ಮಾಡಿ ಓದಿ: ನೋಟಿಸ್ ನೀಡಿಲ್ಲ, ಬೆಳೆ ಪರಿಹಾರ ಕೊಡುತ್ತಿಲ್ಲ | ಭದ್ರಾ ಕಾಮಗಾರಿ ನಡೆಸಲು ಬಿಡುವುದಿಲ್ಲ

ಅ.4 ರಂದು ಬೆಳಗ್ಗೆ ವೇಳೆಗೆ ವಿವಿ ಸಾಗರ ಜಲಾಶಯಕ್ಕೆ 1386 ಕ್ಯೂಸೆಕ್ ನೀರು ಹರಿದು ಬಂದಿದೆ. ಮಳೆ ಇನ್ನೂ ಇರುವುದರಿಂದ ಈ ಒಳಹರಿವು ಹೆಚ್ಚಾಗುವ ಸಾಧ್ಯತೆಯೂ ಇದೆ.135 ಅಡಿ ಎತ್ತರದ ವಿವಿ ಸಾಗರದಲ್ಲಿ ಸದ್ಯ 122.60 ಅಡಿವರೆಗೆ ನೀರು ಬಂದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
