
CHITRADURGA NEWS | 26 SEPTEMBER 2025
ಚಿತ್ರದುರ್ಗ: ಜಿಲ್ಲೆಯ ಜೀವನಾಡಿ, ಮಧ್ಯ ಕರ್ನಾಟಕದ ಏಕೈಕ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿರಿಯೂರು-ಹೊಸದುರ್ಗ ತಾಲೂಕಿನ ಗಡಿಯಲ್ಲಿರುವ ವಾಣಿವಿಲಾಸ ಸಾಗರ ಜಲಾಶಯ ಭರ್ತಿಗೆ ದಿನಗಣನೆ ಪ್ರಾರಂಭವಾಗಿದೆ.
ಕಳೆದೆರಡು ತಿಂಗಳಿನಿಂದ ಭದ್ರಾ ಜಲಾಶಯದಿಂದ ಪ್ರತಿ ದಿನ ೭೦೦ ಕ್ಯೂಸೆಕ್ ನೀರು ಹರಿದು ವಿವಿ ಸಾಗರದ ಒಡಲು ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗುವತ್ತಾ ದಾಪುಗಾಲು ಹಾಕಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಸೆಪ್ಟಂಬರ್ 25 | ಯಾವ ಅಡಿಕೆಗೆ ಎಷ್ಟು ರೇಟ್
135 ಅಡಿ ಎತ್ತರವಿರುವ ವಿವಿ ಸಾಗರದಲ್ಲಿ ೩೦ ಟಿಎಂಸಿ ನೀರು ಸಂಗ್ರಹವಾಗುವ ಸಾಮರ್ಥ್ಯವಿದೆ. ಸೆಪ್ಟಂಬರ್ 26 ಬೆಳಗ್ಗೆ 8 ಗಂಟೆಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 750 ಕ್ಯೂಸೆಕ್ ನೀರು ಹರಿದು ಬಂದಿದೆ.
ಸದ್ಯ ವಿವಿ ಸಾಗರ ಜಲಾಶಯದಲ್ಲಿ 128.25 ಅಡಿವರೆಗೆ ನೀರು ಬಂದಿದ್ದು, ಇನ್ನು ಕೇವಲ ಒಂದು ಮುಕ್ಕಾಲು ಅಡಿ ನೀರು ಬಂದರೆ ಜಲಾಶಯ ಭರ್ತಿಯಾಗಲಿದೆ.
ಇದನ್ನೂ ಓದಿ: ಆಡಳಿತ ನ್ಯಾಯಾಧೀಕರಣ ತರಬೇತಿ | ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಸದ್ಯ ವಿವಿ ಸಾಗರ ಜಲಾಶಯದಲ್ಲಿ 28.95 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 120.30 ಅಡಿ ಅಂದರೆ, 22.29 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

