
CHITRADURGA NEWS | 11 October 2025
ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭರ್ಜರಿ ಒಳಹರಿವು ಬರುತ್ತಿದೆ.
ಇದನ್ನೂ ಓದಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಕಡ್ಡಾಯವಾಗಿ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಲು ಸೂಚನೆ

ಕಳೆದ ಆಗಸ್ಟ್‌ನಿಂದ ಭದ್ರಾ ಜಲಾಶಯದಿಂದ ಪ್ರತಿ ದಿನ 700 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಈಗ ಜಿಲೆಯಲ್ಲಿ ಹಸ್ತಾ ಮಳೆ ಆರ್ಭಟಿಸಿದ ಪರಿಣಾಮ, ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಅಕ್ಟೊಬರ್ 10 ರಂದು ಜಲಾಶಯಕ್ಕೆ 1250 ಕ್ಯೂಸೆಕ್ ನೀರು ಹರಿದು ಬಂದಿದ್ದರೆ, ಅ.11 ಶನಿವಾರ ಬೆಳಗ್ಗೆ ವೇಳೆಗೆ ಜಲಾಶಯಕ್ಕೆ ಬರುತ್ತಿದ್ದ ನೀರಿನ ಪ್ರಮಾಣ ಏಕಾಏಕಿ ದುಪ್ಪಟ್ಟಾಗಿದೆ.
ಇಂದು ಜಲಾಶಯಕ್ಕೆ 2917 ಕ್ಯೂಸೆಕ್ ನೀರು ಹರಿದು ಬಂದಿದೆ.
135 ಅಡಿ ಎತ್ತರದ, 30 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 29.919 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಸದ್ಯ ಜಲಾಶಯದ ಮಟ್ಟ 129.40 ಅಡಿ ತಲುಪಿದೆ.
ಇದನ್ನೂ ಓದಿ: ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ | ನಿಮ್ಮ ಜೊತೆ ರೈತ ಸಂಘ ಇದೆ | ರಾಜ್ಯಾಧ್ಯಕ್ಷ ಬಸವರಾಜಪ್ಪ
ಇದೇ ಪ್ರಮಾಣದ ಒಳಹರಿವು ಇಂದೂ ಮುಂದುವರೆದರೆ ಯಾವ ಕ್ಷಣದಲ್ಲಾದರೂ ಜಲಾಶಯ ಕೋಡಿ ಬೀಳಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
