
CHITRADURGA NEWS | 06 OCTOBER 2025
ಚಿತ್ರದುರ್ಗ: ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಜಿಲ್ಲೆಯ 87 ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಬಗರ್ ಹುಕುಂ ಭೂಮಿ ಸಮಸ್ಯೆ ಬಗೆಹರಿಸಿ, ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ನಿರ್ದೇಶನದಂತೆ ಜಿಲ್ಲೆಯ 87 ಗ್ರಾಮ ಪಂಚಾಯಿತಿಗಳನ್ನು ಧರ್ತಿ ಆಭಾ ಜನಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆ ಅನುಷ್ಠಾನಕ್ಕೆ ಆಯ್ಕೆ ಮಾಡಲಾಗಿದೆ.
ಈ ಗ್ರಾಮಗಳಲ್ಲಿ ಆದಿ ಕರ್ಮಯೋಗಿ ಅಭಿಯಾನ ರೂಪಿಸಿ, ಅನುಷ್ಠಾನಧಿಕಾರಿ ಹಾಗೂ ಭಾಗಿಧಾರರಿಗೆ ತರಬೇತಿ ನೀಡಲಾಗಿದೆ. 17 ಇಲಾಖೆಗಳು 25 ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಿವೆ.
ಅಕ್ಟೋಬರ್ 02 ಮಹಾತ್ಮಾ ಗಾಂಧೀಜಿ ಜಯಂತಿಯಂದು ಜರುಗಿದ ವಿಶೇಷ ಗ್ರಾಮ ಸಭೆಗಳಲ್ಲಿ ಕ್ರಿಯಾ ಯೋಜನೆಗಳಲ್ಲಿ ಅನುಮೋದನೆ ನೀಡಲಾಗಿದೆ. 2047 ವರ್ಷದ ವಿಕಸಿತ ಭಾರತ ದೃಷ್ಟಿಕೋನದೊಂದಿಗೆ 2030ರ ವರೆಗಿನ 5 ವರ್ಷಗಳ ಅವಧಿಗೆ ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ.
ಈ ವಿವರಗಳನ್ನು ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯದ ಆದಿ ಪ್ರಸರಣ ಪ್ರೋರ್ಟಲ್‍ನಲ್ಲಿ ಅಪ್ಲೋಡ್ ಮಾಡಿ, ರಾಜ್ಯ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಕಳುಹಿಸಿ ಕೊಡಲು ಪಂಚಾಯಿತಿ ಅಭಿವೃದ್ಧಿ ಕ್ರಮ ವಹಿಸಿದ್ದಾರೆ.
ಇದನ್ನೂ ಓದಿ: B.Ed ಕೋರ್ಸ್ ಗೆ ಅರ್ಜಿ | ನವೆಂಬರ್ 03 ಕೊನೆ ದಿನ
ಯೋಜನೆಯಡಿ ಚಳ್ಳಕೆರೆ 21, ಚಿತ್ರದುರ್ಗ 11, ಮೊಳಕಾಲ್ಮೂರು 13, ಹೊಳಲ್ಕೆರೆ 6, ಹಿರಿಯೂರು 3 ಹಾಗೂ ಹೊಸದುರ್ಗ ತಾಲ್ಲೂಕಿನ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಬುಡಕಟ್ಟು ಸಮುದಾಯಗಳನ್ನು ಸಬಲೀಕರಣ ಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
