CHITRADURGA NEWS | 03 JULY 2026
ಚಿತ್ರದುರ್ಗ: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ವಿವಿಧ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ
ವಿಕಲಚೇತನ ವಿದ್ಯಾರ್ಥಿಗಳ ಶಿಕ್ಷಣ ಪ್ರೋತ್ಸಾಹಕ್ಕಾಗಿ ಶುಲ್ಕ ಮರುಪಾವತಿ ಸೌಲಭ್ಯ, ವಿಕಲಚೇತನರನ್ನು ವಿವಾಹವಾಗುವ ದಂಪತಿಗಳಿಗೆ ಧನಸಹಾಯ ನೀಡುವ ಯೋಜನೆ, ವಿಕಲಚೇತನರ ಆರೋಗ್ಯ ರಕ್ಷಣೆಗಾಗಿ ವಿಮಾ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಯೋಜನೆಗಳ ಪ್ರಯೋಜನ ಪಡೆಯಲು ಇಚ್ಛಿಸುವ ಅರ್ಹ ವಿಕಲಚೇತನರು ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡಿಸಿರುವ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (UDID ಕಾರ್ಡ್), ಇತ್ತೀಚಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್, ನಿವಾಸಿ ಧೃಡೀಕರಣ ಪತ್ರ, ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿ ವೇತನ ಹಾಗೂ ಶುಲ್ಕ ಮರುಪಾವತಿಗಾಗಿ ಹಿಂದಿನ ತರಗತಿಯ ಅಂಕಪಟ್ಟಿ, ಪ್ರಸ್ತುತ ವರ್ಷದ ವ್ಯಾಸಂಗ ಧೃಡೀಕರಣ ಪತ್ರ ಮತ್ತು ಕಾಲೇಜು ಮೂಲ ಶುಲ್ಕದ ರಸೀದಿ ಹೊಂದಿರಬೇಕು. ವಿವಾಹ ಯೋಜನೆಗೆ ವಿವಾಹ ನೊಂದಣಾಧಿಕಾರಿಯಿಂದ ಪಡೆದ ಪ್ರಮಾಣ ಪತ್ರ (ಗೆಜೆಟೆಡ್ ಅಧಿಕಾರಿಗಳ ಸಹಿಯೊಂದಿಗೆ) ಮತ್ತು ಜನನ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.
ಅರ್ಜಿಗಳನ್ನು ಸಲ್ಲಿಸಲು 31-07-2026 ಕೊನೆಯ ದಿನಾಂಕವಾಗಿರುತ್ತದೆ. ಈ ಯೋಜನೆಗಳ ಅರ್ಜಿ ನಮೂನೆಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ www.dwdsc.kar.nic.in ನಿಂದ ನೇರವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಆಯಾ ತಾಲೂಕು ಪಂಚಾಯಿತಿ/ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು (MRW/VRW/URW) ಸಂಪರ್ಕಿಸಿ ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಮಾಹಿತಿಗಾಗಿ ತಾಲ್ಲೂಕುವಾರು ಚಿತ್ರದುರ್ಗ 9880821934, ಚಳ್ಳಕೆರೆ 9611266930, ಹಿರಿಯೂರು 9902888901, 9902898901 ಹೊಳಲ್ಕೆರೆ 9740030227,ಹೊಸದುರ್ಗ 9741829990, ಮೊಳಕಾಲ್ಮೂರು 9742725576 ಕರೆ ಮಾಡಬಹದು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ಅಥವಾ ಕಚೇರಿ ದೂರವಾಣಿ ಸಂಖ್ಯೆ 08194-235284 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

