
CHITRADURGA NEWS | 16 OCTOBER 2025
ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು 2025-26 ನೇ ಸಾಲಿನಲ್ಲಿ ವಿವಿಧ ಸೌಲಭ್ಯಗಳ ಮಂಜೂರಾತಿಗಾಗಿ, ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ | ADC ಕುಮಾರಸ್ವಾಮಿ

ಜಿಲ್ಲೆಯ ಅರ್ಹ ವಿಕಲಚೇತನರಿಗೆ ಶುಲ್ಕ ಮರುಪಾವತಿ, ವಿವಾಹ ಪ್ರೊತ್ಸಾಹ ಧನ, ನಿರಾಮಯ ಯೋಜನೆಗಾಗಿ ಅರ್ಜಿ ಆಹ್ವಾನಿಸಿದ್ದು, ವಿಕಲಚೇತನರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಆಧಾರ್ ಲಿಂಕ್ ಮಾಡಿಸಿರುವ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ವೈದ್ಯಕೀಯ ಪ್ರಮಾಣಪತ್ರ, ವಿಕಲಚೇತನರ ವಿಶಿಷ್ಟ ಗುರುತಿ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್, ನಿವಾಸಿ ದೃಢೀಕರಣ ಪತ್ರ ಸಲ್ಲಿಸಬೇಕು.
ಶುಲ್ಕ ಮರುಪಾವತಿ ಯೋಜನೆಗೆ ಹಿಂದಿನ ತರಗತಿಯಲ್ಲಿ ತೇರ್ಗಡೆಯಾದ ಅಂಕಪಟ್ಟಿ, ಪ್ರಸ್ತುತ ವ್ಯಾಸಂಗದ ದೃಢೀಕರಣ ಪತ್ರ, ಕಾಲೇಜಿಗೆ ಶುಲ್ಕ ಪಾವತಿ ಮಾಡಿದ ಮೂಲ ರಸೀದಿ ಸಲ್ಲಿಸಬೇಕು. ವಿವಾಹ ಪ್ರೋತ್ಸಾಹಧನ ಯೋಜನೆಗೆ ವಿವಾಹ ನೊಂದಣಾಧಿಕಾರಿಗಳಿಂದ ಪಡೆದ ನೊಂದಣಿ ಪ್ರಮಾಣ ಪತ್ರ, ಗೆಜೆಟೆಡ್ ಅಧಿಕಾರಿಗಳ ಸಹಿ, ಜನನ ಪ್ರಮಾಣ ಪತ್ರ, ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆಯನ್ನು www.dwdsc.kar.nic.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ಅಥವಾ ತಾ.ಪಂ. ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ, ನಗರ ವ್ಯಾಪ್ತಿಯಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಪಡೆಯಬಹುದು.
ಇದನ್ನೂ ಓದಿ: RSS BAN | ಮೂರ್ಖತನದ ಪರಮಾವಧಿ | ಬಿ.ವೈ.ವಿಜಯೇಂದ್ರ
ಹೆಚ್ಚಿನ ಮಾಹಿತಿಗೆ ಚಿತ್ರದುರ್ಗ- 9880821934, ಚಳ್ಳಕೆರೆ-9611266930, ಹಿರಿಯೂರು-9902888901, ಹೊಳಲ್ಕೆರೆ-9740030227, ಹೊಸದುರ್ಗ-9741829990 ಮತ್ತು ಮೊಳಕಾಲ್ಮೂರು-9742725576 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
