
CHITRADURGA NEWS | 20 SEPTEMBER 2025
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಈಚೆಗೆ ಹತ್ಯೆಗೀಡಾಗಿದ್ದ ಹಿರಿಯೂರು ತಾಲ್ಲೂಕಿನ ಕೊವೇರಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಷಿತಾ ಅವರ ದಾರುಣ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಆಯೋಗದ ನಿರ್ದೇಶಕ ಜಗನ್ನಾಥ್ ಅವರು ಶುಕ್ರವಾರ ಜಿಲ್ಲೆಗೆ ಭೇಟಿ ನೀಡಿ, ಪ್ರಕರಣದ ವಿಚಾರಣೆ ಮತ್ತು ವಾಸ್ತವ ಸ್ಥಿತಿ ಪರಿಶೀಲಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಸೆಪ್ಟಂಬರ್ 19 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಈ ಪ್ರಕರಣದಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಆಯೋಗದ ನಿರ್ದೇಶಕರು, ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರೊಂದಿಗೆ ಚರ್ಚಿಸಿದರು.
ಪ್ರಕರಣದ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ವಿವರಿಸಿದರು. ಪೊಲೀಸ್ ತನಿಖೆ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದರು. ನಂತರ ಹತ್ಯೆ ನಡೆದ ಗೋನೂರು ಬಳಿಯ ಪಾಕಶಾಲಾ ಹತ್ತಿರದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿನಿ ನಿಲಯಾರ್ಥಿಯಾಗಿದ್ದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿದ ಅವರು, ಹಿರಿಯೂರು ತಾಲ್ಲೂಕಿನ ಕೊವೇರಹಟ್ಟಿಯಲ್ಲಿನ ವರ್ಷಿತಾಳ ಮನೆಗೆ ಭೇಟಿ ನೀಡಿ, ವರ್ಷಿತಾ ಅವರ ತಾಯಿ ಜ್ಯೋತಿ ಅವರಿಗೆ ಸಾಂತ್ವಾನ ಹೇಳಿ ಸರ್ಕಾರದಿಂದ ದೊರಕುವ ಸೌಲಭ್ಯ ನೀಡಲಾಗಿದ್ದು, ಇನ್ನೂ ಹೆಚ್ಚಿನ ಸೌಲಭ್ಯಕ್ಕೆ ಶಿಫಾರಸ್ಸು ಮಾಡುವುದಾಗಿ ಆಯೋಗದ ನಿರ್ದೇಶಕರು ತಿಳಿಸಿದರು.
ಇದನ್ನೂ ಓದಿ: ನೂತನ ವಾಲ್ಮೀಕಿ ಭವನದಲ್ಲಿ ಈ ಭಾರಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ | ADC ಕುಮಾರಸ್ವಾಮಿ
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಐಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ದೀಪಾ, ಚಿತ್ರದುರ್ಗ ಸರ್ಕಲ್ ಇನ್ಸ್‍ಪೆಕ್ಟರ್ ಮುದ್ದುರಾಜ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
