Connect with us

ಶಿವಶರಣ ಮಾದಾರ‌ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ | ಜಯಬಸವ ದೇವರೆಂದು ನಾಮಕರಣ

ಮುಖ್ಯ ಸುದ್ದಿ

ಶಿವಶರಣ ಮಾದಾರ‌ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ | ಜಯಬಸವ ದೇವರೆಂದು ನಾಮಕರಣ

CHITRADURGA NEWS | 10 MAY 2024

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ ಮಾಡಲಾಯಿತು. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಟು ಸ್ವೀಕಾರ ಮಾಡಿದರು.

ಮಠದ ಆವರಣದಲ್ಲಿರುವ ಬಸವಾದಿ ಶರಣರ ಧರ್ಮ ಸಂಸತ್ ಸಭಾ ಮಂಟಪದಲ್ಲಿ ವಟು ಸ್ವೀಕಾರ ಧಾರ್ಮಿಕ ಕಾರ್ಯಗಳು ನಡೆದವು.

ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ನೂತನ ವಟುವಿಗೆ ಜಯಬಸವ ದೇವರು ಎಂದು ನಾಮಕರಣ ಮಾಡಲಾಯಿತು.

ಬೆಳಗ್ಗೆ 8 ಗಂಟೆಗೆ ಪ್ರಾರಂಭವಾದ ವಟು ಸ್ವೀಕಾರ ಸಮಾರಂಭದಲ್ಲಿ ಲಿಂಗಧೀಕ್ಷೆ, ವಿಭೂತಿ ಧಾರಣೆ, ಲಿಂಗಧಾರಣೆ, ಹಸ್ತಮಸ್ತಕ ಸಂಯೋಜನೆ, ಪಾದಪೂಜೆ ಸೇರಿದಂತೆ ಬಸವ ತತ್ವದ ಪ್ರಕಾರ ಧಾರ್ಮಿಕ ವಿಧಿ ವಿಧಾನ ನೆರವೇರಿದವು.

ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ವಟು:

ಮಾದಾರ ಚನ್ನಯ್ಯ ಗುರುಪೀಠಕ್ಕೆ ಸ್ವೀಕಾರ ಮಾಡಿರುವ ವಟು ಜಯಬಸವ ದೇವರ ಮೂಲ ಊರು, ಬಾಗಲಕೋಟೆ ಜಿಲ್ಲೆ, ಮಹಾಲಿಂಗಪುರ.

ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ ಕಾರ್ಯಕ್ರಮ

ಸವಿತಾ ಮಹಾಲಿಂಗಪ್ಪ ದಂಪತಿಗಳ ಎರಡನೇ ಪುತ್ರ 9 ವರ್ಷದ ಲಖನ್ ಮಠಕ್ಕೆ ವಟು ಆಗಿದ್ದಾರೆ.

ಈ ದಂಪತಿಗೆ ಒಟ್ಟು ನಾಲ್ವರು ಮಕ್ಕಳಿದ್ದು, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು. ಇದರಲ್ಲಿ ಎರಡನೇ ಮಗ ಲಖನ್ ಅವರನ್ನು ಮಠಕ್ಕೆ ನೀಡಲಾಗಿದೆ.

ವಟು ಸ್ವೀಕಾರ ಸಮಾರಂಭದಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಮಹಾಸ್ವಾಮಿಜಿ, ಭಗಿರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೊಸದುರ್ಗ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಹಂಪಿಯ ಮಾತಂಗಮುನಿ ಮಠದ ಶ್ರೀ ಮಾತಂಗಮುನಿ ಸ್ವಾಮೀಜಿ, ಲಂಬಾಣಿ ಗುರುಪೀಠದ ಶ್ರೀ ನಂದ ಮಸಂದ ಸ್ವಾಮಿಗಳು, ಚಿತ್ರದುರ್ಗದ ಶ್ರೀ ವೇದಾರ ಗುರುಪೀಠದ ಕೇತೇಶ್ವರ ಸ್ವಾಮೀಜಿ,ಕೊರಟಗೆರೆಯ ಶ್ರೀ ಮಹಾಲಿಂಗ ಸ್ವಾಮಿಗಳು, ರಾಣೆಬೆನ್ನೂರಿನ ಶ್ರೀ ಗಜದಂಡ ಸ್ವಾಮಿಗಳು, ಸಿದ್ದಾರೂಢ ಆಶ್ರಮದ ಶ್ರೀ ಜಯದೇವ ಸ್ವಾಮಿಗಳು,ತಿಳುವಳ್ಳಿಯ ಶ್ರೀ ನಿರಂಜನಾಂದ ಸ್ವಾಮಿಗಳು ಶ್ರೀ ತಿಪ್ಪೇರುದ್ರ ಸ್ವಾಮಿಗಳು  ಸತ್ಯಕ್ಕ ಜಯದೇವಿತಾಯಿ ಶ್ರೀ ಪೂರ್ಣಾನಂದ ಸ್ವಾಮಿಗಳು ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version