ಮುಖ್ಯ ಸುದ್ದಿ
ವೇದ ಪಿಯು ಕಾಲೇಜು | ಅತ್ಯುತ್ತಮ ಸಾಧನೆಯ ಫಲಿತಾಂಶ

Published on
CHITRADURGA NEWS | 10 APRIL 2024
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆಯ ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ಹೊರ ಹೊಮ್ಮಿದೆ.
2023-24 ನೇ ಸಾಲಿನ ಪರೀಕ್ಷೆಗೆ ಒಟ್ಟು 97 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 97 ವಿದ್ಯಾರ್ಥಿಗಳು ಸಹ ಉತ್ತೀರ್ಣರಾಗಿರುವ ಮೂಲಕ ಶೇ 100 ಫಲಿತಾಂಶ ಕಾಲೇಜಿಗೆ ದೊರೆತಿದೆ. 10 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳಿಸಿದ್ದಾರೆ. 52 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಗಳಿಸಿದ್ದಾರೆ. ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ.
ಕ್ಲಿಕ್ ಮಾಡಿ ಓದಿ: ಯುಗಾದಿಯಲ್ಲಿ 4 ರಾಶಿಗೆ ರಾಜಯೋಗ | ಹಬ್ಬದ ಸಂಭ್ರಮದಲ್ಲಿ ಜೊತೆಯಾಗಲಿದೆ ಅದೃಷ್ಟ
ಉತ್ತಮ ಸಾಧನೆಯನ್ನು ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಶ್ರಮಿಸಿದಂತಹ ಉಪನ್ಯಾಸಕರು, ಪ್ರಾಂಶುಪಾಲರಿಗೆ ಸಂಸ್ಥೆ ಅಧ್ಯಕ್ಷ ಡಿ.ಟಿ.ರವೀಂದ್ರ ಅಭಿನಂದಿಸಿದ್ದಾರೆ.
Continue Reading
Related Topics:achievement, Best, College, result, Veda PU, ಅತ್ಯುತ್ತಮ, ಕಾಲೇಜು, ಫಲಿತಾಂಶ, ವೇದ ಪಿಯು, ಸಾಧನೆ

Click to comment