
CHITRADURGA NEWS | 26 SEPTEMBER 2025
ಚಿತ್ರದುರ್ಗ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹರಿಯುವ ಅಘನಾಶಿನಿ ನದಿಯನ್ನು ದಕ್ಷಿಣ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹರಿಯುವ ವೇದಾವತಿ ನದಿಗೆ ಜೋಡಣೆ ಮಾಡುವ ಯೋಜನೆಯೊಂದು ಸದ್ದಿಲ್ಲದೆ ತಯಾರಾಗಿದೆ.
ಹೌದು, ಇಂಥದ್ದೊಂದು ವಿಚಾರವನ್ನು ಉತ್ತರ ಕನ್ನಡದ ವೃಕ್ಷಲಕ್ಷ ಆಂದೋಲನ ಬಹಿರಂಗಪಡಿಸಿದ್ದು, ಜಲಸಂಪನ್ಮೂಲ ಇಲಾಖೆಯಲ್ಲಿ ಅಘನಾಶಿನಿ ನದಿ ತಿರುವು ಯೋಜನೆಯ ಮಹತ್ವದ ಬೆಳವಣಿಗೆಯನ್ನು ಬಹಿರಂಗಪಡಿಸಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ಸೆಪ್ಟಂಬರ್ 25 | ಯಾವ ಅಡಿಕೆಗೆ ಎಷ್ಟು ರೇಟ್
ಈ ಸಂಬಂಧ ಇಂದಿನ ವಿಜಯ ಕರ್ನಾಟಕ ಪತ್ರಿಕೆ ಶಿರಸಿಯಿಂದ ವರದಿ ಪ್ರಕಟಿಸಿದೆ. ವರದಿಯಲ್ಲಿ ಉಲ್ಲೇಖಿಸಿರುವಂತೆ ಒಂದೊಮ್ಮೆ ವೇದಾವತಿ-ಅಘನಾಶಿನಿ ನದಿ ಜೋಡಣೆಯಾದರೆ, ಬಯಲು ಸೀಮೆಯ ಜನರ ಸಮಗ್ರ ನೀರಾವರಿ ಕನಸಿಗೆ ನೇರೆರೆದಂತಾಗುತ್ತದೆ.
ಎತ್ತಿನಹೊಳೆ ಯೋಜನೆಗಿಂತ ಇದು ದೊಡ್ಡದಾಗಿದ್ದು, 23 ಸಾವಿರ ಕೋಟಿ ರೂ. ವೆಚ್ಚದ ಯೋಜನೆಯ ಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದೆ.
ಇದನ್ನೂ ಓದಿ: ವಾಣಿವಿಲಾಸ ಸಾಗರ ಭರ್ತಿಗೆ ದಿನಗಣನೆ | ಈ ಭಾರಿ ಭರ್ತಿಯಾದರೆ ಹೊಸ ಇತಿಹಾಸ
ಇದಕ್ಕಾಗಿ 194 ಕಿ.ಮೀ ಪೈಪ್‌ಲೈನ್ ಹಾಕಲಾಗುತ್ತದೆ. NWD ಬೆಂಗಳೂರು ಕಚೇರಿ ಈ ವರದಿ ಸಿದ್ಧಪಡಿಸಿ ಹೈದರಾಬಾದ್ ಕಚೇರಿಗೆ ರವಾನಿಸಿದ್ದು, ಈ ವರದಿ ಇಲ್ಲಿಂದ ದೆಹಲಿ ಕಚೇರಿಗೆ ತಲುಪಲಿದೆ.
ಅಘನಾಶಿನಿ ನದಿಗೆ ಸಿದ್ದಾಪುರ ತಾಲೂಕು ಬಾಳೆಕೊಪ್ಪ ಬಳಿ ಅಣೆಕಟ್ಟು ನಿರ್ಮಿಸಿ ಅಲ್ಲಿಂದ ೩೫ ಟಿಎಂಸಿ ನೀರನ್ನು ವೇದಾವತಿ ನದಿ ಮೂಲಕ ವಾಣಿವಿಲಾಸ ಸಾಗರ ಜಲಾಶಯಕ್ಕೆ ಹರಿಸುವ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.
ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ದಸರಾ ಹಬ್ಬಕ್ಕೆ ವಿಶೇಷ ರೈಲು ಸಂಚಾರ
ಗೋಳಿಮಕ್ಕಿ, ಹಾರ್ಸಿಕಟ್ಟಾ, ಸಿದ್ದಾಪುರ, ಸಾಗರ, ಶಿವಮೊಗ್ಗ, ತರೀಕೆರೆ, ಅಜ್ಜಂಪುರ ಮಾರ್ಗವಾಗಿ ವಾಣಿವಿಲಾಸ ಸಾಗರಕ್ಕೆ ನೀರು ತಲುಪಿಸುವುದು ಯೋಜನೆಯ ಉದ್ದೇಶ.
ಪಶ್ಚಿಮಘಟ್ಟದ ಜನರ ಹೋರಾಟದ ಎಚ್ಚರಿಕೆ:
ಅಘನಾಶಿನಿ-ವೇದಾವತಿ ನದಿ ಜೋಡಣೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ವೃಕ್ಷಲಕ್ಷ ಆಂದೋಲನ ಸಂಸ್ಥೆಯ ಅಧ್ಯಕ್ಷರಾದ ಅನಂತ ಹೆಗಡೆ ಆಶಿಸರ ಬೇಡ್ತಿ, ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಈ ಬಗ್ಗೆ ಸಮಾಲೋಚನೆ ನಡೆಸಿ ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
