
CHITRADURGA NEWS | 22 MAY 2024
ಚಿತ್ರದುರ್ಗ: ಕಳೆದ ನಾಲ್ಕೈದು ದಿನದಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಶುರಾಂಪುರದಲ್ಲಿ ವೇದಾವತಿ ನದಿ ಮೈದುಂಬಿ ಹರಿಯುತ್ತಿದೆ. ಬಿಸಿಲ ಬೇಗೆಯಿಂದ ಬಳಲಿದ್ದ ಜನ-ಜಾನುವಾರುಗಳಿಗೆ ತಂಪೆರೆದಂತಾಗಿದೆ.
ನದಿಯು ಮೈದುಂಬಿ ಹರಿಯುತ್ತಿರುವುದನ್ನು ಜನರು ತಂಡೋಪ ತಂಡವಾಗಿ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ. ನೀರಲ್ಲಿ ಮೀನು ಶಿಕಾರಿ ಮಾಡುತ್ತಿರುವುದು ಸಾಮಾನ್ಯವಾಗಿದೆ. ಕೆಲವರು ನೀರಿನ ವಿಡಿಯೊ, ಪೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.
ಕಳೆದ ವರ್ಷ ಮಳೆಯನ್ನೇ ಕಾಣದೆ ಸಂಪೂರ್ಣ ಬರಗಾಲ ನೋಡಿದ್ದ ರೈತರು ಈ ಬಾರಿ ಮುಂಗಾರು ಪ್ರಾರಂಭದಲ್ಲೇ ಉತ್ತಮ ಮಳೆಯಾಗುತ್ತಿರುವುದರಿಂದ ಹರ್ಷಗೊಂಡಿದ್ದು, ಬಿತ್ತನೆಗೆ ಕೃಷಿ ಭೂಮಿಯನ್ನು ಅಣಿಗೊಳಿಸಲು ಸಜ್ಜಾಗುತ್ತಿದ್ದಾರೆ.
ಕ್ಲಿಕ್ ಮಾಡಿ ಓದಿ: ಕಂಟೇನರ್ ಲಾರಿಯಲ್ಲಿ ಎತ್ತುಗಳ ಸಾಗಾಣೆ | ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ
ಮಳೆಯಿಂದಾಗಿ ಸಿದ್ದೇಶ್ವರನದುರ್ಗ ಗ್ರಾಮದ ಮುಖ್ಯರಸ್ತೆಯ ಎರಡೂ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಮನೆಗಳಿಗೆ ನುಗ್ಗುತ್ತಿದ್ದು, ಸಂಬಂಧಪಟ್ಟ ವರು ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಲೋಕಸಭೆ ಚುನಾವಣೆ ಮತ ಎಣಿಕೆ | ಅಧಿಕ ಸಿಬ್ಬಂದಿ ನಿಯೋಜನೆಗೆ ಕಡಿವಾಣ
ಮೂರು ವರ್ಷಗಳ ಹಿಂದೆ ಇಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ, ಮಳೆ ಬಂದರೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲ. ಪರಿಣಾಮವಾಗಿ ಮಳೆ ನೀರು ಮನೆಗಳಿಗೆ ನುಗ್ಗುತ್ತಿದೆ. ಜೊತೆಗೆ ತಗ್ಗು ಪ್ರದೇಶ ಇರುವ ಕಡೆ ಮನೆಗಳಿಗೆ ನೀರು ನುಗ್ಗಿದ್ದು, ಮನೆಗಳು ಬೀಳುವ ಆತಂಕ ಎದುರಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

