
CHITRADURGA NEWS | 06 AUGUST 2024
ಚಿತ್ರದುರ್ಗ: ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ಧಿಗಾಗಿ 2024-25ನೇ ಸಾಲಿಗೆ ಅನಿಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ(Application) ಸಲ್ಲಿಸಲು ಕೊನೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: Taralabalu mata: ಸಿರಿಗೆರೆ ತರಳಬಾಳು ಮಠಕ್ಕೆ ಬೈಲಾ ಇಲ್ಲ | ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ವಿವಿಧ ಯೋಜನೆ:
- ಬಸವ ಬೆಳಗು ಯೋಜನೆ
- ಜೀವಜಲ ಯೋಜನ
- ಕಾಯಕ ಕಿರಣ ಯೋಜನೆ
- ಭೋಜನಾಲಯ ಕೇಂದ್ರ
- ವಿಭೂತಿ ನಿರ್ಮಾಣ ಘಟಕ
- ಸ್ವಾವಲಂಬಿ ಸಾರಥಿ ಯೋಜನೆ( ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ)
- ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ)
- ಸ್ವಾತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ: ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್‌ಮಾಡಿಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರು ಸಹ ಆನ್ಲೈನ್ ಮೂಲಕ ಅರ್ಜಿ ಸಲ್ಲಸಬಹುದು. ಒಂದು ಕಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲಾತಿಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.
ಕ್ಲಿಕ್ ಮಾಡಿ ಓದಿ: Sirigere mata: ದಾವಣಗೆರೆ ಸಭೆಯಲ್ಲಿದ್ದ ಸ್ವಾರ್ಥಿಗಳನ್ನು ಮಠದಿಂದ ಬಹಿಷ್ಕರಿಸಿ | ಸಿರಿಗೆರೆ ಮಠದ ಭಕ್ತರ ಒಕ್ಕೊರಲ ಒತ್ತಾಯ
ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ನಿಗಮದ ಯೋಜನೆಗಳಲ್ಲಿ ಒಂದು ಬಾರಿ ಯಾವುದಾದರು ಯೋಜನೆಯ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ https://kvldcl.karnataka.gov.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
