
CHITRADURGA NEWS | 30 JUNE 2026
ಚಿತ್ರದುರ್ಗ: ಶಿಕ್ಷಣದ ಜೊತೆ ಮಕ್ಕಳು ಸಂಸ್ಕಾರವನ್ನು ಕಲಿಯಬೇಕೆಂದು ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ದಿ ಸಮಾಜದ ಜಿಲ್ಲಾ ಕಾರ್ಯದರ್ಶಿ ಎಂ.ಕೆ.ಧನುಶಂಕರ್ ಕರೆ ನೀಡಿದರು.
ಇದನ್ನೂ ಓದಿ: ಮರ್ಚೆಂಟ್ಸ್ ಬ್ಯಾಂಕ್ | ವರ್ಷಾಂತ್ಯದಲ್ಲಿ ಅಮೃತ ಮಹೋತ್ಸವ | ಅಧ್ಯಕ್ಷ ರಘುರಾಮರೆಡ್ಡಿ
ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ದಿ ಸಮಾಜದ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಹೊಸದುರ್ಗ ನಗರದ ಗುರು ಒಪ್ಪತ್ತಿನ ಸ್ವಾಮಿ ವಿರಕ್ತ ಮಠದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ರಂಗಗಳಲ್ಲಿಯೂ ಸ್ಪರ್ಧೆಯಿರುವುದರಿಂದ ಒಂದೊಂದು ಅಂಕಗಳಿಗೂ ಮಹತ್ವವಿದೆ. ಹಾಗಾಗಿ ಮಕ್ಕಳು ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವುದರಿಂದ ವಿದ್ಯಾರ್ಥಿ ಜೀವನದಲ್ಲಿ ಮುಂದೆ ಹೆಚ್ಚಿನ ಸಾಧನೆ ಮಾಡಲು ಸಹಕಾರಿಯಾಗುವುದಲ್ಲದೆ ಇತರೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದಂತಾಗುತ್ತದೆಂದು ತಿಳಿಸಿದರು.
ಹೊಸದುರ್ಗ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ದಿ ಸಮಾಜದ ಅಧ್ಯಕ್ಷ ಬಿ.ಪಿ.ದಯಾನಂದ ಮಾತನಾಡುತ್ತ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದಂತಾಗುತ್ತದೆಂದು ಹೇಳಿದರು.
ಇದನ್ನೂ ಓದಿ: ಅಂತರಾಷ್ಟ್ರೀಯ MSME ದಿನಾಚರಣೆ | ಭಿತ್ತಿಪತ್ರ ಬಿಡುಗಡೆಗೊಳಿಸಿದ ಸಿಇಓ ಡಾ.ಆಕಾಶ್
ಮುಖಂಡರುಗಳಾದ ಚಿದಾನಂದಪ್ಪ, ಮೃತ್ಯುಂಜಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ, ವಿರುಪಾಕ್ಷಪ್ಪ, ಒಪ್ಪತ್ತಿನಸ್ವಾಮಿ ಪತ್ತಿನ ಸಹಕಾರ ಸಂಘದ ನಿಕಟಪೂರ್ವ ಅಧ್ಯಕ್ಷ ಎ.ಎಸ್.ಸಿದ್ದರಾಮೇಶ್, ಜಿಲ್ಲಾಧ್ಯಕ್ಷ ಜೆ.ಶಿವಪ್ರಕಾಶ್, ಮಂಜುನಾಥ್, ಉಪನ್ಯಾಸಕ ಚಿದಾನಂದ್, ಮಠದ ವ್ಯವಸ್ಥಾಪಕ ಮಹೇಶ್ ನಿಟುವಳ್ಳಿ ಇದ್ದರು.
ಪುಷ್ಪಲತಾ ಪ್ರಾರ್ಥಿಸಿದರು. ಮಲ್ಲೇಶ್ ರೇಷ್ಮೆರಾಜ ಸ್ವಾಗತಿಸಿದರು. ಮಂಜುನಾಥ್ ನಿರೂಪಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

