CHITRADURGA NEWS | 21 AUGUST 2026
ಚಿತ್ರದುರ್ಗ: ಚಳ್ಳಕೆರೆ ರಸ್ತೆಯ ವೆಂಕಟೇಶ್ವರ ಬಡಾವಣೆಯಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಿವಾಸಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ
ಪ್ರತಿಭಟನಾಕಾರರು ಮಾತನಾಡಿ, ಹಲವು ವರ್ಷಗಳಿಂದ ಬಡಾವಣೆಯಲ್ಲಿ ವಾಸಿಸುತ್ತಿದ್ದರೂ ಸ್ವಂತ ನಿವೇಶನವಾಗಲಿ, ಮನೆಗಳಾಗಲಿ ಇಲ್ಲ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ನಮಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಿ ಜೀವನ ನಿರ್ವಹಿಸುವುದೇ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.
ಸರ್ಕಾರದಿಂದ ಪ್ರತಿ ತಾಲ್ಲೂಕಿಗೆ 50 ಸಾವಿರ ನಿವೇಶನಗಳನ್ನು ನೀಡುವ ಆದೇಶವಿದೆ. ಅದರಂತೆ ವೆಂಕಟೇಶ್ವರ ಬಡಾವಣೆಯ ಅರ್ಹ ನಿವಾಸಿಗಳಿಗೂ ನಿವೇಶನಗಳನ್ನು ಮಂಜೂರು ಮಾಡಿ, ಮನೆ ನಿರ್ಮಿಸಿಕೊಳ್ಳಲು ಅಗತ್ಯ ನೆರವು ನೀಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ
ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘದ ಅಧ್ಯಕ್ಷ ಜಿ.ಎಂ. ಪ್ರಕಾಶ್, ಗಂಗಮ್ಮ, ಟಿ. ದ್ರಾಕ್ಷಾಯಿಣಿ, ಮೇರಿ, ಲಕ್ಷ್ಮಿ, ಮಂಜುಳ, ರತ್ನಮ್ಮ, ಮಮತ, ಸರೋಜಮ್ಮ, ಭೈರಮ್ಮ, ಗಂಗಾ, ಸುಧಾ, ಚೌಡಮ್ಮ, ಕಮಲಮ್ಮ, ಪದ್ಮಾವತಿ, ನಾಗರತ್ನ, ಕಾವ್ಯ, ಹನುಮಕ್ಕ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

