ಮುಖ್ಯ ಸುದ್ದಿ
ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ಪ್ರಥಮ RANK
Published on
ಚಿತ್ರದುರ್ಗ ನ್ಯೂಸ್.ಕಾಂ: ದಾವಣಗೆರೆ ವಿಶ್ವವಿದ್ಯಾನಿಲಯ ನಡೆಸಿದ ಪದವಿ ತರಗತಿಗಳ ಅಂತಿಮ ಫಲಿತಾಂಶದಲ್ಲಿ ಚಿತ್ರದುರ್ಗದ ಶ್ರೀ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ವಿವಿ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
2023 ಜುಲೈ-ಆಗಸ್ಟ್ ತಿಂಗಳಲ್ಲಿ ನಡೆಸಿದ್ದ ಅಂತಿಮ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಶ್ರೀ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗದ ವಿದ್ಯಾರ್ಥಿನಿ ವಿ.ಕವಿತಾ ರ್ಯಾಂಕ್ ಪ್ರಥಮ ಗಳಿಸಿದ್ದಾರೆ.
ಇದನ್ನೂ ಓದಿ: SRS ಕಾಲೇಜಿಗೆ ಎರಡು ರ್ಯಾಂಕ್
ರ್ಯಾಂಕ್ ಪಡೆದ ವಿದ್ಯಾರ್ಥಿನಿ ಕವಿತಾ ಸಾಧನೆಗೆ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ, ಆಡಳಿತಾಧಿಕಾರಿ ಎಚ್.ಚಂದ್ರಕಲಾ ಹಾಗೂ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಕಾಲೇಜಿನ ಪ್ರಾಚಾರ್ಯರು, ಬೋಧಕರು, ಬೋಧಕೇತರ ಸಿಬ್ಬಂಧಿ ಅಭಿನಂದನೆ ಸಲ್ಲಿಸಿದ್ದಾರೆ.
Continue Reading
Related Topics:Chitradurga, Davangere University, Devaraja Arasu Institute of Education, M.C.Raghuchandan, M.Chandrappa, Sri Venkateswara First Grade College, ಎಂ.ಚಂದ್ರಪ್ಪ, ಎಂ.ಸಿ.ರಘುಚಂದನ್, ಚಿತ್ರದುರ್ಗ, ದಾವಣಗೆರೆ ವಿಶ್ವವಿದ್ಯಾನಿಲಯ, ದೇವರಾಜ ಅರಸು ಶಿಕ್ಷಣ ಸಂಸ್ಥೆ, ಶ್ರೀ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜು
Click to comment