ಮುಖ್ಯ ಸುದ್ದಿ
ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ಪ್ರಥಮ RANK
ಚಿತ್ರದುರ್ಗ ನ್ಯೂಸ್.ಕಾಂ: ದಾವಣಗೆರೆ ವಿಶ್ವವಿದ್ಯಾನಿಲಯ ನಡೆಸಿದ ಪದವಿ ತರಗತಿಗಳ ಅಂತಿಮ ಫಲಿತಾಂಶದಲ್ಲಿ ಚಿತ್ರದುರ್ಗದ ಶ್ರೀ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ವಿವಿ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
2023 ಜುಲೈ-ಆಗಸ್ಟ್ ತಿಂಗಳಲ್ಲಿ ನಡೆಸಿದ್ದ ಅಂತಿಮ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಶ್ರೀ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗದ ವಿದ್ಯಾರ್ಥಿನಿ ವಿ.ಕವಿತಾ ರ್ಯಾಂಕ್ ಪ್ರಥಮ ಗಳಿಸಿದ್ದಾರೆ.
ಇದನ್ನೂ ಓದಿ: SRS ಕಾಲೇಜಿಗೆ ಎರಡು ರ್ಯಾಂಕ್
ರ್ಯಾಂಕ್ ಪಡೆದ ವಿದ್ಯಾರ್ಥಿನಿ ಕವಿತಾ ಸಾಧನೆಗೆ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ, ಆಡಳಿತಾಧಿಕಾರಿ ಎಚ್.ಚಂದ್ರಕಲಾ ಹಾಗೂ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಕಾಲೇಜಿನ ಪ್ರಾಚಾರ್ಯರು, ಬೋಧಕರು, ಬೋಧಕೇತರ ಸಿಬ್ಬಂಧಿ ಅಭಿನಂದನೆ ಸಲ್ಲಿಸಿದ್ದಾರೆ.