CHITRADURGA NEWS | 24 AUGUST 2026
ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಗೋರಕ್ಷ ಕಾರ್ಯಕರ್ತರ ಮೇಲೆ ನಡೆದ ಕೊಲೆ ಯತ್ನದ ದಾಳಿಯನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಚೋದನೆ | ಕಾರಜೋಳ ಆರೋಪ
ಶಿಕಾರಿಪುರ ತಾಲ್ಲೂಕಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು, ಕಾನೂನುಬದ್ಧವಾಗಿ ಜಾನುವಾರುಗಳನ್ನು ರಕ್ಷಿಸಲು ಮುಂದಾದ ಗೋರಕ್ಷಕರ ಮೇಲೆ ಪೂರ್ವನಿಯೋಜಿತ ಸಂಚು ನಡೆಸಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಯತ್ನಿಸಿರುವುದು ಆತಂಕಕಾರಿ ಘಟನೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ದಾಳಿಯಲ್ಲಿ ಗೋರಕ್ಷ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದು, ಅವರ ವಾಹನವನ್ನು ಧ್ವಂಸಗೊಳಿಸಲಾಗಿದೆ. ಇಂತಹ ಘಟನೆಗಳಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಲಾಯಿತು.
“ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020” ಜಾರಿಯಲ್ಲಿದ್ದರೂ ರಾಜ್ಯದ ವಿವಿಧೆಡೆ ಅಕ್ರಮ ಗೋಸಾಗಾಟ ಹಾಗೂ ಅಕ್ರಮ ಕಸಾಯಿಖಾನೆಗಳು ನಡೆಯುತ್ತಿರುವುದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿದೆ ಎಂದು ವಿಹಿಂಪ ಪದಾಧಿಕಾರಿಗಳು ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
ಗೋರಕ್ಷಕರ ಮೇಲೆ ಕೊಲೆ ಯತ್ನ ನಡೆಸಿದ ಆರೋಪಿಗಳನ್ನು ಹಾಗೂ ಅವರ ಹಿಂದಿರುವ ಸಂಚುಕೋರರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಕ್ರಮ ಗೋಹತ್ಯೆ ಹಾಗೂ ಕಸಾಯಿಖಾನೆಗಳ ವಿರುದ್ಧ ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಬೇಕು.
ರಾಜ್ಯದ ಜಿಲ್ಲೆಗಳು ಹಾಗೂ ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಿ, ವಿಶೇಷ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅಕ್ರಮ ಗೋಸಾಗಾಟ ಜಾಲವನ್ನು ಪತ್ತೆಹಚ್ಚಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಶಿಕಾರಿಪುರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರವಾನಗಿ ಇಲ್ಲದೆ ಕಾರ್ಯಾಚರಿಸುತ್ತಿರುವ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಂಡು ನಿಯಮಾನುಸಾರ ಬಂದ್ ಮಾಡಿಸಬೇಕು ಎಂದು ಒತ್ತಾಯಿಸಲಾಯಿತು.
ಇದನ್ನೂ ಓದಿ: ಅಕ್ಟೋಬರ್.12, 13ರಂದು ವೈಭವದ ರಾಜಾ ವೀರ ಮದಕರಿ ನಾಯಕ ಜಯಂತ್ಯೋತ್ಸವ | ಕೃಷ್ಣಮೂರ್ತಿ
ಈ ಸಂದರ್ಭದಲ್ಲಿ ರಾಘವೇಂದ್ರ, ತೇಜಶ್ವರ ಎಂ.ಜೆ.ಮಠ್, ಕಿಶೋರ್, ಜಿ.ರಾಮಾಂಜನೇಯ, ಪ್ರೇಮ್, ಸಿದಾರ್ಥ ಹಾಗೂ ಸಂದೀಪ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

