CHITRADURGA NEWS | 27 JULY 2026
ಚಿತ್ರದುರ್ಗ: ಯಾವುದೇ ರಾಜಕೀಯ ಪಕ್ಷಗಳ ಬೆಂಬಲವಿಲ್ಲದೆ ಯುವ ಸಮುದಾಯ ಮತ್ತು ವಿದ್ಯಾರ್ಥಿಗಳು ಒಂದಾಗಿ ನಡೆಸಿದ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಜಗದೀಶ್ ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಗೆ ಎಲ್ಲರ ಅಭಿಪ್ರಾಯ ಸಂಗ್ರಹ | ರಿಪಿನ್ ಬೊಹರಾ
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಶಿಕ್ಷಣ ಸಚಿವರ ಧೋರಣೆ ಹಾಗೂ ಎನ್‍ಟಿಎ ಸಂಸ್ಥೆಯ ದುರಾಡಳಿತದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಪಾಯಕ್ಕೆ ಸಿಲುಕಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಕೇವಲ ರಾಜಕೀಯ ಲಾಭಕ್ಕಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಜನಸಾಮಾನ್ಯರ ಮತ್ತು ಯುವಕರ ಗಮನವನ್ನು ಬೇರೆಡೆ ಸೆಳೆಯಲು ಧರ್ಮ ಹಾಗೂ ಹಿಂದುತ್ವದ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ನಡೆಸಿದ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಹುದ್ದೆಗಳ ನೇಮಕಾತಿಗೆ ಮುಂದಾದಂತೆ, ಈಗಲೂ ಯುವ ಸಮುದಾಯ ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯದಲ್ಲಿ ಉದ್ಯೋಗ ಸಿಗುವುದು ದುಸ್ತರವಾಗಲಿದೆ ಎಂದ ದೂರಿದರು.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 3,50,000 ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಭರ್ತಿ ಮಾಡಬೇಕು. ಖಾಸಗೀಕರಣಕ್ಕೆ ಆದ್ಯತೆ ನೀಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಕ್ರಿಯೆಯನ್ನು ಕೈಬಿಡಬೇಕು. ಭವಿಷ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನತೆ ತಮ್ಮ ಹಕ್ಕುಗಳಿಗಾಗಿ ನಡೆಸುವ ಪ್ರತಿಯೊಂದು ಸತ್ಯಾಗ್ರಹ ಮತ್ತು ಹೋರಾಟಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು.
ಇದನ್ನೂ ಓದಿ: ಕೃತಕ ಬುದ್ಧಿಮತ್ತೆ (AI) ವಿಷಯಕ್ಕೆ ಅತಿಥಿ ಶಿಕ್ಷಕರ ನೇಮಕಾತಿ | ಅರ್ಜಿ ಆಹ್ವಾನ
ಬಡ ಹಾಗೂ ಹಿಂದುಳಿದ ವರ್ಗಗಳ ಯುವಕರಿಗೆ ಸೂಕ್ತ ಉದ್ಯೋಗ ಮತ್ತು ಶಿಕ್ಷಣ ಸಿಗಬೇಕಾದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಈಡೇರಬೇಕು. ಕೇವಲ ಉಚಿತ ಭಾಗ್ಯಗಳನ್ನು ನೀಡುವುದಕ್ಕಿಂತ ಯುವಕರಿಗೆ ಗುಣಮಟ್ಟದ ಶಿಕ್ಷಣ ಮತ್ತು ಉದ್ಯೋಗಾವಕಾಶ ಕಲ್ಪಿಸುವುದೇ ಸರ್ಕಾರದ ನಿಜವಾದ ಕರ್ತವ್ಯ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಮಣ್ಣ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಮಹಿಳಾ ಅಧ್ಯಕ್ಷೆ ಜ್ಯೋತಿ, ಕಾರ್ಯದರ್ಶಿ ವಿನೋದಮ್ಮ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

