Connect with us

    Village Accountants; ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ ಎರಡನೇ ದಿನಕ್ಕೆ 

    ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ

    ಮುಖ್ಯ ಸುದ್ದಿ

    Village Accountants; ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ ಎರಡನೇ ದಿನಕ್ಕೆ 

    CHITRADURGA NEWS | 27 SEPTEMBER 2024

    ಚಿತ್ರದುರ್ಗ: ಕೆಲಸದ ಒತ್ತಡ, ಅನಿರ್ಧಿಷ್ಟ ಕೆಲಸದ ಅವಧಿ, ಮೂಲ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಕೆಲಸ ಬಹಿಷ್ಕರಿಸಿರುವ ಗ್ರಾಮ ಲೆಕ್ಕಾಧಿಕಾರಿಗಳ(Village accountants) ಅನಿರ್ಧಿಷ್ಠಾವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

    ಕ್ಲಿಕ್ ಮಾಡಿ ಓದಿ: Hindu MahaGanapathi shobhayatra; ಹಿಂದೂ ಮಹಾಗಣಪತಿ ಶೋಭಯಾತ್ರೆಗೆ ಸಜ್ಜಾದ ಕೋಟೆನಾಡು | ಸ್ವರ್ಗದಂತಿರುವ ದುರ್ಗ ನೋಡಿ 

    ಕಪ್ಪು ಪಟ್ಟಿ ಧರಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮುಷ್ಕರ ನಡೆಸಿದ ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯಿಸಿದರು.

    ಕಂದಾಯ ಇಲಾಖೆ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಮೊಬೈಲ್ ತಂತ್ರಾಂಶಗಳಿಂದ ಗ್ರಾಮ ಲೆಕ್ಕಾಧಿಕಾರಿಗಳು ಕೆಲಸ ನಿರ್ವಹಿಸುವುದು ಕಷ್ಟವಾಗುತ್ತಿದೆ.

    ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ರದ್ದುಪಡಿಸಿ ರಜಾ ದಿನಗಳಲ್ಲಿ ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹೇರಬಾರದು.

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿಯಿರುವ ಪ್ರಥಮ ದರ್ಜೆ ಸಹಾಯಕ, ರಾಜಸ್ವ ನಿರೀಕ್ಷಕರ ಹುದ್ದೆಗಳಿಗೆ ತಕ್ಷಣವೇ ಪದೋನ್ನತಿ ನೀಡುವಂತೆ ಪ್ರತಿಭಟನಾನಿರತ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದರು.

    ಕ್ಲಿಕ್ ಮಾಡಿ ಓದಿ: Train: ರೈಲ್ವೇ ಹಳಿ ನವೀಕರಣ : ರಸ್ತೆ ಮಾರ್ಗ ಬದಲಾವಣೆ

    ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ರಾಜ್ಯ ಗೌರವಾಧ್ಯಕ್ಷ ವಿ.ಪಾಂಡುರಂಗಪ್ಪ, ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ, ಕಂದಾಯ ಇಲಾಖೆ ಜಿಲ್ಲಾಧ್ಯಕ್ಷ ಬಿ.ಎಸ್.ಸಿದ್ದೇಶಿ, ತಾಲ್ಲೂಕು ಅಧ್ಯಕ್ಷ ಸಂಪತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮದ್ ಇರ್ಫಾನ್, ತಾಲ್ಲೂಕಿನ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top