CHITRADURGA NEWS | 27 SEPTEMBER 2024
ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಸೆ.29ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ(Village Administrator)ಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ(EXAM)ಯ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ, ನಿಷ್ಪಕ್ಷಪಾತವಾಗಿ, ಪರಿಣಾಮಕಾರಿಯಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ಲಿಕ್ ಮಾಡಿ ಓದಿ: Shobhayatre: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಪೊಲೀಸ್ ಸರ್ಪಗಾವಲು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಸಾಮಾನ್ಯ ಪ್ರವೇಶ ಪರೀಕ್ಷಾ (ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ) ಸಿದ್ಧತೆಯ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಸೆ.29ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಅರ್ಹತಾ ಪರೀಕ್ಷೆಯಾಗಿದೆ. ಜಿಲ್ಲೆಯ 46 ಪರೀಕ್ಷಾ ಕೇಂದ್ರಗಳಿಂದ ಒಟ್ಟು 17798 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ಪೀಠೋಪಕರಣ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಆಗಬಾರದು. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅಗತ್ಯ ಕ್ರಮವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕ್ಲಿಕ್ ಮಾಡಿ ಓದಿ: Temples; ದೇವಸ್ಥಾನಗಳ ನಿರ್ವಹಣೆ ಭಕ್ತರಿಗೆ ಬಿಡಿ | ಸರ್ಕಾರಕ್ಕೆ VHP ಆಗ್ರಹ
ಪರೀಕ್ಷಾ ಕಾರ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಯಾವುದೇ ಲೋಪದೋಷಗಳು ಆಗದಂತೆ ತಮಗೆ ನೀಡಿರುವ ಜವಾಬ್ದಾರಿಯನ್ನು ಬಹಳ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಸಿದ್ಧತೆಯನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‌ನೆಟ್ ಕೇಂದ್ರಗಳನ್ನು ಪರೀಕ್ಷಾ ನಡೆಯುವ ದಿನದಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್‌ಗಳನ್ನು ಹಾಗೂ ಎಲೆಕ್ಟಾçನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಕಡ್ಡಾಯ ಕನ್ನಡ ಪರೀಕ್ಷೆಯು ಇದೇ ಸೆ.29ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 46 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿಲಾಗಿದ್ದು, ಇದರಲ್ಲಿ 17798 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಕ್ಲಿಕ್ ಮಾಡಿ ಓದಿ: Audition; ZEE ಕನ್ನಡದಿಂದ ಸರಿಗಮಪ ಆಡಿಷನ್ ಚಿತ್ರದುರ್ಗದಲ್ಲಿ | ಯಾರೆಲ್ಲಾ ಭಾಗವಹಿಸಬಹುದು ಗೊತ್ತಾ
ಜಿಲ್ಲೆಯ ಮೊಳಕಾಲ್ಮುರು ಹೊರತುಪಡಿಸಿ ಚಳ್ಳಕೆರೆಯಲ್ಲಿ 6 ಪರೀಕ್ಷಾ ಕೇಂದ್ರಗಳಿಂದ 2352 ಅಭ್ಯರ್ಥಿಗಳು, ಚಿತ್ರದುರ್ಗ ನಗರದಲ್ಲಿ 26 ಪರೀಕ್ಷಾ ಕೇಂದ್ರಗಳಿಂದ 10082 ಅಭ್ಯರ್ಥಿಗಳು, ಹಿರಿಯೂರು 5 ಕೇಂದ್ರಗಳಿಂದ 2016 ಅಭ್ಯರ್ಥಿಗಳು, ಹೊಳಲ್ಕೆರೆ 4 ಪರೀಕ್ಷಾ ಕೇಂದ್ರಗಳಿಂದ 1272 ಅಭ್ಯರ್ಥಿಗಳು ಹಾಗೂ ಹೊಸದುರ್ಗದಲ್ಲಿ 5 ಪರೀಕ್ಷಾ ಕೇಂದ್ರಗಳಿAದ 2076 ಅಭ್ಯರ್ಥಿಗಳು ಸೇರಿದಂತೆ ಒಟ್ಟು 17798 ಅಭ್ಯರ್ಥಿಗಳು ಪರೀಕ್ಷಾ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕೇಂದ್ರಗಳು ಇರುವುದಿಲ್ಲ. ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಹೆಚ್ಚಿನ ಬಂದೋಬಸ್ತ್ ಅವಶ್ಯಕತೆ ಇದೆ ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ವೀಕ್ಷಕರು ಇದ್ದರು.
ಕ್ಲಿಕ್ ಮಾಡಿ ಓದಿ: Crime: ಪೊಲೀಸರ ಸೋಗಿನಲ್ಲಿ ಕಳ್ಳರು | ಚಿನ್ನದ ಸರ ಕದ್ದು ಎಸ್ಕೇಪ್
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
