Connect with us

    All the best..: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆ | ಪರೀಕ್ಷಾರ್ಥಿಗಳಿಗೆ ಆಲ್‌ ದಿ ಬೆಸ್ಟ್‌

    VA EXAM

    ಮುಖ್ಯ ಸುದ್ದಿ

    All the best..: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆ | ಪರೀಕ್ಷಾರ್ಥಿಗಳಿಗೆ ಆಲ್‌ ದಿ ಬೆಸ್ಟ್‌

    CHITRADURGA NEWS | 29 SEPTEMBER 2024
    ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭಾನುವಾರ (ಸೆ.29) ರಂದು ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ, ನಿಷ್ಪಕ್ಷಪಾತವಾಗಿ, ಪರಿಣಾಮಕಾರಿಯಾಗಿ ನಿರ್ವಹಿಸಲು ಜಿಲ್ಲಾಡಳಿತ ಸಜ್ಜಾಗಿದೆ.

    ಜಿಲ್ಲೆಯ 46 ಪರೀಕ್ಷಾ ಕೇಂದ್ರಗಳಿಂದ ಒಟ್ಟು 17,798 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಪರೀಕ್ಷೆ ನಡೆಯಲಿದೆ.

    ಕ್ಲಿಕ್ ಮಾಡಿ ಓದಿ: ಜಯದೇವ ಜಗದ್ಗುರು ತೋರಿದ ಹಾದಿಯಲ್ಲಿ ಸಾಗೋಣ | ಡಾ. ಬಸವಕುಮಾರ ಸ್ವಾಮೀಜಿ

    ಜಿಲ್ಲೆಯ ಮೊಳಕಾಲ್ಮುರು ಹೊರತುಪಡಿಸಿ ಚಳ್ಳಕೆರೆಯಲ್ಲಿ 6 ಪರೀಕ್ಷಾ ಕೇಂದ್ರಗಳಿಂದ 2,352 ಅಭ್ಯರ್ಥಿಗಳು, ಚಿತ್ರದುರ್ಗ ನಗರದಲ್ಲಿ 26 ಪರೀಕ್ಷಾ ಕೇಂದ್ರಗಳಿಂದ 10,082 ಅಭ್ಯರ್ಥಿಗಳು, ಹಿರಿಯೂರು 5 ಕೇಂದ್ರಗಳಿಂದ 2,016 ಅಭ್ಯರ್ಥಿಗಳು, ಹೊಳಲ್ಕೆರೆ 4 ಪರೀಕ್ಷಾ ಕೇಂದ್ರಗಳಿಂದ 1,272 ಅಭ್ಯರ್ಥಿಗಳು ಹಾಗೂ ಹೊಸದುರ್ಗದಲ್ಲಿ 5 ಪರೀಕ್ಷಾ ಕೇಂದ್ರಗಳಿಂದ 2,076 ಅಭ್ಯರ್ಥಿಗಳು ಸೇರಿದಂತೆ ಒಟ್ಟು 17798 ಅಭ್ಯರ್ಥಿಗಳು ಪರೀಕ್ಷಾ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕೇಂದ್ರಗಳು ಇರುವುದಿಲ್ಲ. ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಹೆಚ್ಚಿನ ಬಂದೋಬಸ್ತ್‌ ಕಲ್ಪಿಸಲಾಗಿದೆ.

    ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 29 | ಹಣಕಾಸಿನ ಸಮಸ್ಯೆಯಿಂದ ಮುಕ್ತಿ, ಮಕ್ಕಳಿಂದ ಶುಭ ಸುದ್ದಿ, ಯಾರಿಗೂ ಮಾತು ಕೊಡಬೇಡಿ

    ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿನ ಜೆರಾಕ್ಸ್‌ ಅಂಗಡಿ ಹಾಗೂ ಕಂಪ್ಯೂಟರ್‌ ಇಂಟರ್‌ ನೆಟ್‌ ಕೇಂದ್ರಗಳನ್ನು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಆದೇಶಿಸಲಾಗಿದೆ.

    ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top