ಮುಖ್ಯ ಸುದ್ದಿ
ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ

CHITRADURGA NEWS | 14 FEBRUARY 2025
ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ ಪುಲ್ವಾಮ ದಾಳಿಯಲ್ಲಿ ಮೃತರಾದ 40 ಯೋಧರ ಆತ್ಮಕ್ಕೆ ಶಾಂತಿ ಕೋರಿ ಒಂದು ಮೌನಾಚರಣೆ ಮಾಡಲಾಯಿತು.
Also Read: ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಐವರ ಬಂಧನ | 5 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ

ಪುಲ್ವಾಮ ದಾಳಿಯಲ್ಲಿ ನಲವತ್ತು ಯೋಧರು ಬಲಿಯಾಗಿ ಆರು ವರ್ಷಗಳಾಗಿದ್ದು, ಗೌರವಾರ್ಥವಾಗಿ ಮೌನ ಆಚರಿಸಿದ ಗ್ರಾಮ ಆಡಳಿತಾಧಿಕಾರಿಗಳು ನಮ್ಮ ಬೇಡಿಕೆಗಳು ಈಡೇರುವತನಕ ಮುಷ್ಕರವನ್ನು ಹಿಂದಕ್ಕೆ ಪಡೆಯುವುದಿಲ್ಲವೆಂದು ಪಟ್ಟು ಹಿಡಿದರು.
ಗ್ರಾಮ ಆಡಳಿತಾಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಗುಣಮಟ್ಟದ ಟೇಬಲ್, ಕುರ್ಚಿ, ಆಲ್ಮೆರಾ, ಮೊಬೈಲ್ ಫೋನ್, ಸಿಯುಜಿ. ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ ಲ್ಯಾಪ್ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ನೀಡಬೇಕು. ವಿಶೇಷ ಚೇತನರು, ಆರೋಗ್ಯದ ಸಮಸ್ಯೆಯಿರುವ ಪ್ರಕರಣಗಳು ಹಾಗೂ ಮಾಜಿ ಸೈನಿಕರ ನಿಯೋಜನೆಗಳು ಕೌನ್ಸಿಲಿಂಗ್ ಮೂಲಕ ಆಗಬೇಕು.
ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡಿರುವ ವೃಂದ ಮತ್ತು ನೇಮಕಾತಿ ತಿದ್ದುಪಡಿ ಯಥಾವತ್ತಾಗಿರಬೇಕು. ಅಂತರ್ ಜಿಲ್ಲಾ ವರ್ಗಾವಣೆಯ ಕೆ.ಪಿ.ಎಸ್.ಆರ್.ನಿಯಮ 16A ರ ಉಪಖಂಡ(2) ನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಕಂದಾಯ ಇಲಾಖೆ ಹಾಗೂ ಸರ್ಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿಯಾಗಬೇಕು.
ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5 ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಇತರೆ ದಾಖಲೆಗಳಿಲ್ಲದೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನಕ್ಕೆ ಚಾಲನೆ ನೀಡುತ್ತಿರುವುದನ್ನು ಕೈಬಿಡುವಂತೆ ಪ್ರತಿಭಟನಾನಿರತರು ಸರ್ಕಾರವನ್ನು ಒತ್ತಾಯಿಸಿದರು.
Also Read: ನರೇಗಾ ತಾಂತ್ರಿಕಾ ಸಹಾಯಕ ಕೆಲಸದಿಂದ ವಜಾ
ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಪಿ.ಸ0ಪತ್‌ಕುಮಾರ್, ಗೌರವಾಧ್ಯಕ್ಷ ಎನ್.ಎಸ್.ಈಶ್ವರಪ್ಪ, ಉಪಾಧ್ಯಕ್ಷರಾದ ಪಾಂಡುರAಗಪ್ಪ, ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ವಡೇರ್, ಖಜಾಂಚಿ ಜಿ.ಎಸ್.ಸುರೇಶ್, ಎನ್.ಜೆ.ತಾಯಕ್ಕ, ಪ್ರಿಯಾ ಬಿ.ಆರ್. ಶ್ರೀದೇವಿ, ಎಲ್.ಅಣ್ಣೇಶ್, ಸುಂದರ್ರಾಜ್ನಾಯ್ಕ, ಎನ್.ಬಸವನಗೌಡ, ಎಲ್.ಮಂಜುನಾಥ್ ಇತರರಿದ್ದರು.
