ಮುಖ್ಯ ಸುದ್ದಿ
ಪಂಡರಹಳ್ಳಿ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಆರೋಗ್ಯ ಸಮಿತಿ ಸಭೆ | ಪಲ್ಸ್, ಪೋಲಿಯೊ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ

CHITRADURGA NEWS | 24 FEBRUARY 2024
ಚಿತ್ರದುರ್ಗ: ರಾಷ್ಟ್ರೀಯ ಜಂತುಹುಳು ಬಾದೆ ನಿವಾರಣಾ ಕಾರ್ಯಕ್ರಮ ಮತ್ತು ಪಲ್ಸ್ ಪೋಲಿಯೊ ಕಾರ್ಯಕ್ರಮ ಯಶಸ್ವಿ ಗೊಳಿಸಲು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಕರೆ ನೀಡಿದರು.
ಚಿತ್ರದುರ್ಗ ತಾಲ್ಲೂಕಿನ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಗೋಡಬನಾಳ್ ಮತ್ತು ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಒಟ್ಟು 17 ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ ಸದಸ್ಯರಿಗೆ ವಿಶ್ವಾಸ್ ಆಂದೋಲನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಗ್ರಾಮಗಳಲ್ಲಿ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ಗ್ರಾಮ ಅರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿಗಳು ಚಟುವಟಿಕೆ ರೂಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮುಕ್ತ ನಿಧಿಗಳ ಬಳಕೆ ಗ್ರಾಮ ಆರೋಗ್ಯ ಸಮಸ್ಯೆ ಬಗೆಹರಿಸುವಲ್ಲಿ ಸಭೆ ಚರ್ಚೆಗಳನ್ನು ಮಾಡಿ ರಾಷ್ಟ್ರೀಯ ಜಂತುಹುಳು ಬಾದೆ ನಿವಾರಣಾ ಕಾರ್ಯಕ್ರಮ ಮತ್ತು ಪಲ್ಸ್ ಪೋಲಿಯೊ ಕಾರ್ಯಕ್ರಮ ಯಶಸ್ವಿ ಗೊಳಿಸಲು ಸಮುದಾಯದ ಸಹಭಾಗಿತ್ವಕ್ಕೆ ಸಹಕರಿಸಿ ಎಂದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ ಸದಸ್ಯರು ಗ್ರಾಮದ ಆರೋಗ್ಯ ಸಮಸ್ಯೆಗಳನ್ನು ಪಟ್ಟಿ ಮಾಡಿ ಸಭೆಗಳಲ್ಲಿ ಚರ್ಚಿಸಿ ನಿರ್ಧಾರಗಳನ್ನು ಕೈಗೊಂಡ ನಡಾವಳಿಗಳನ್ನು ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಮೂಲಕ ಮುಕ್ತ ನಿಧಿಗಳ ಬಳಕೆ ಮಾಡಬಹುದು ಎಂದು ತಿಳಿಸಿದರು.
ಇದನ್ನೂ ಓದಿ: ಫೆಬ್ರವರಿ 27 ಮಂಗಳವಾರ ವಿದ್ಯುತ್ ವ್ಯತ್ಯಯ
ಜೀವನ ಶೈಲಿ ಬದಲಾವಣೆ, ಆರೋಗ್ಯಕರ ಅಭ್ಯಾಸಗಳು, ಪೌಷ್ಟಿಕ ಆಹಾರ ಸೇವನೆಯಿಂದ ಪರಿಸರ ನೈರ್ಮಲ್ಯ, ಶೌಚಾಲಯಗಳ ಬಳಕೆ, ಬಾಲ್ಯವಿವಾಹ ನಿಯಂತ್ರಣ ಸೇರಿದಂತೆ ಇತರೆ ಸಾಮಾಜಿಕ ಪಿಡುಗುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಾರ್ಷಿಕ ಕ್ರಿಯಾ ಯೋಜನೆಗಳನ್ನು ತಯಾರಿಸಿ ವರದಿ ನೀಡಿ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕ್ರಮ ಸಂಯೋಜಕ, ಗ್ರಾಮ ಆರೋಗ್ಯ ಸಮಿತಿಗಳ ರಚನೆ, ಸದಸ್ಯರ ಜವಾಬ್ದಾರಿ ನಿರ್ವಹಿಸಬೇಕಾದ ದಾಖಲಾತಿಗಳ ಬಗ್ಗೆ ತಿಳಿಸಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಭರದ ತಯಾರಿ | ದುರ್ಗದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿದ ಸಚಿವ ಎ.ನಾರಾಯಣಸ್ವಾಮಿ
ಕಾರ್ಯಕ್ರಮದಲ್ಲಿ ಡಾ.ಅಭಿಷೇಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಚೋಳಘಟ್ಟ ಗ್ರಾಮ ಪಂಚಾಯತಿ ಸದಸ್ಯರಾದ ಆರ್.ಸುರೇಶ್ ಉಗ್ರಾಣ್, ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಸದಸ್ಯರಾದ ಭಾರತಮ್ಮ, ಶಶಿರೇಖಾ, ಚಂದ್ರಮ್ಮ, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಜೆ.ಮಮತ, ಶಾರದಾ ಬಾಯಿ, ಹೇಮಲತಾ, ಆಶಾ,ರಾಜೇಶ್ವರಿ, ಲತಾ, ಸಮುದಾಯ ಆರೋಗ್ಯಾಧಿಕಾರಿಗಳಾದ ಉಸ್ನಾ, ಲೋಕಮ್ಮ, ಪ್ರದೀಪ್, ಸುಧಾಕರ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಕೃಷ್ಣಪ್ಪ, ಸಂತೋಷ್, ಮಧು, ಸಿದ್ದೇಶ್ವರ, ಪ್ರಜ್ವಲ್ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
