
ದಾವಣಗೆರೆ: ಚುನಾವಣಾ ಪ್ರಚಾರದಲ್ಲಿ ಭಾರೀ ಸದ್ದು ಗದ್ದಲ ಸೃಷ್ಟಿಸಿದ್ದ ಇನ್‍ಸೈಟ್ ಐಎಎಸ್ ಅಕಾಡೆಮಿಯ ಜಿ.ಬಿ.ವಿನಯ್ ಕುಮಾರ್ ಮತ ಎಣಿಕೆಯಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ. ಇದರೊಂದಿಗೆ ಸದ್ಯದ ಮಟ್ಟಿಗೆ ಬಿಜೆಪಿಯ ನಿರೀಕ್ಷೆಗಳು ತಲೆಕೆಳಗಾಗಿವೆ.
ವಿನಯ್ ಕುಮಾರ್ ಕನಿಷ್ಟ 1 ಲಕ್ಷ ಮತ ಪಡೆಯುತ್ತಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಗಾಳು ಹಾಕುತ್ತಾರೆ ಎಂಬ ಮಾಧ್ಯಮಗಳ ನಿರೀಕ್ಷೆಗಳು ಸದ್ಯಕ್ಕೆ ಫಲ ಕೊಡುತ್ತಿಲ್ಲ.
ಈವರೆಗಿನ ಮತ ಎಣಿಕೆಯಲ್ಲಿ ವಿನಯ್ ಕೇವಲ 11073 ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ.
ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಸದ್ಯ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ ಸಾಧಿಸಿದ್ದಾರೆ. ಪ್ರಭಾ ಮಲ್ಲಿಕಾರ್ಜುನ್ 5032 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
