ಲೋಕಸಮರ 2024
ನೀತಿ ಸಂಹಿತೆ ಉಲ್ಲಂಘನೆ | 181 ಪ್ರಕರಣ | ರೂ.1.12 ಕೋಟಿ ಮೌಲ್ಯದ ಮದ್ಯ ಜಪ್ತಿ
CHITRADURGA NEWS | 28 MARCH 2024
- ಚಿತ್ರದುರ್ಗ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯು ಜಾರಿ ಮತ್ತು ತನಿಖಾ ಕಾರ್ಯ ತೀವ್ರಗೊಳಿಸಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ರೂ.1.12 ಕೋಟಿಗೂ ಅಧಿಕ ಮೌಲ್ಯದ 22,360 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧವಾಗಿ 181 ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಡಾ.ಬಿ.ಮಾದೇಶ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉದ್ಯಮಿ ನವರತನ್ ಮಲ್ ನಿಧನ
ಚಳ್ಳಕೆರೆ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮೌಲ್ಯದ ಮದ್ಯ ಜಪ್ತು ಮಾಡಲಾಗಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.59,26,238 ಮೌಲ್ಯದ 14,741 ಲೀಟರ್ ಅಕ್ರಮ ಮದ್ಯ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ರೂ.52,32,166 ಮೌಲ್ಯದ 7,440 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: 150 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಣೆ
ಉಳಿದಂತೆ ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ ರೂ.11,089 ಮೌಲ್ಯದ 30 ಲೀಟರ್ ಮದ್ಯ, ಹಿರಿಯೂರು ಕ್ಷೇತ್ರ ವ್ಯಾಪ್ತಿಯಲ್ಲಿ ರೂ. 34,049 ಮೌಲ್ಯದ 76 ಲೀಟರ್ ಮದ್ಯ, ಹೊಸದುರ್ಗ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.17,956 ಮೌಲ್ಯದ 39 ಲೀಟರ್ ಮದ್ಯ, ಹೊಳಲ್ಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.15,551 ಮೌಲ್ಯದ 34 ಲೀಟರ್ ಮದ್ಯ ವಶಪಡಿಸಿಕೊಂಡು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಡಾ.ಬಿ.ಮಾದೇಶ್ ತಿಳಿಸಿದ್ದಾರೆ.