
CHITRADURGA NEWS | 13 SEPTEMBER 2024
ಚಿತ್ರದುರ್ಗ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಗೆ ಬಳಸಿದ್ದ ಟ್ರ್ಯಾಕ್ಟರ್, ಡಿ.ಜೆ. ಸ್ಪೀಕರ್ ಹಾಗೂ ಜನರೇಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತಾಲ್ಲೂಕಿನ ಭೀಮಸಮುದ್ರ ಗ್ರಾಮದಲ್ಲಿ ನಡೆದಿದೆ.
ಬುಧವಾರ ರಾತ್ರಿ 11.20ರವರೆಗೂ ಡಿ.ಜೆ. ಬಳಕೆ, ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಗ್ರಾಮದ ವಿನಾಯಕ ಗೆಳೆಯರ ಬಳಗದ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಮೆರವಣಿಗೆಗೆ ಬಳಸಿದ್ದ ಟ್ರ್ಯಾಕ್ಟರ್, ಡಿ.ಜೆ. ಸ್ಪೀಕರ್ ಹಾಗೂ ಜನರೇಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 13 | ಮೌಲ್ಯದ ವಸ್ತು ಖರೀದಿ, ವ್ಯವಹಾರಗಳಲ್ಲಿ ಈಡೇರುವ ನಿರೀಕ್ಷೆ
ಗ್ರಾಮದ ಮುಖ್ಯರಸ್ತೆಯಲ್ಲಿ ಮಧ್ಯರಾತ್ರಿವರೆಗೂ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಮೆರವಣಿಗೆ ನಡೆಸಲಾಗಿದೆ. ಆಯೋಜಕರು ಮೆರವಣಿಗೆ ಸಂಬಂಧ ಯಾವುದೇ ಅನುಮತಿ ಪಡೆದಿರಲಿಲ್ಲ. ಜೊತೆಗೆ ಡಿ.ಜೆ ಸೌಂಡ್ ಸಿಸ್ಟಂ ಬಳಸಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಮಧ್ಯರಾತ್ರಿವರೆಗೂ ಗಣೇಶ ಮೆರವಣಿಗೆ ಮಾಡಿದರೆ, ನಿಯಮ ಉಲ್ಲಂಘಿಸಿ ಡಿ.ಜೆ ಸೌಂಡ್ ಸಿಸ್ಟಂ ಬಳಸಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಸ್‌ಪಿ ರಂಜಿತ್ ಕುಮಾರ್ ಬಂಡಾರು ಎಚ್ಚರಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
