Connect with us

Virendra Heggade: ಡಿ.25ಕ್ಕೆ ಹೊಳಲ್ಕೆರೆಗೆ ವೀರೇಂದ್ರ ಹೆಗ್ಗಡೆ ಭೇಟಿ | ನೂತನ ಕಟ್ಟಡ ವಿಕಾಸ ಸೌಧ ಉದ್ಘಾಟನೆ

ಮುಖ್ಯ ಸುದ್ದಿ

Virendra Heggade: ಡಿ.25ಕ್ಕೆ ಹೊಳಲ್ಕೆರೆಗೆ ವೀರೇಂದ್ರ ಹೆಗ್ಗಡೆ ಭೇಟಿ | ನೂತನ ಕಟ್ಟಡ ವಿಕಾಸ ಸೌಧ ಉದ್ಘಾಟನೆ

CHITRADURGA NEWS | 11 DECEMBER 2024

ಚಿತ್ರದುರ್ಗ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ(Virendra Heggade) ಅವರು ಡಿ.25 ರಂದು ಹೊಳಲ್ಕೆರೆಗೆ ಭೇಟಿ ನೀಡಲಿದ್ದು, ಅಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ನಿರ್ಮಿಸಿರುವ ವಿಕಾಸ ಸೌಧ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಡಿಸೆಂಬರ್ 10 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಚಿತ್ರದುರ್ಗ ಜಿಲ್ಲಾ ಜನಜಾಗೃತಿ ವೇದಿಕೆ ತ್ರೈಮಾಸಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು.

ನೂತನ ಕಟ್ಟಡ ಉದ್ಘಾಟನೆ ಮಾಡಿದ ನಂತರ, ಪೂಜ್ಯರು ಶಿವನಕೆರೆಯ ಶಿವನ ಮೂರ್ತಿಗೆ ಮಾಲಾರ್ಪಣೆ ಮಾಡಿ, ನಂತರ ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ವಿವಿಧ ಸಂಘಟನೆಗಳು ನೇತೃತ್ವದಲ್ಲಿ ನಡೆಯುವ ಶೋಭಾ ಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಹೊಳಲ್ಕೆರೆ ಪಟ್ಟಣದ ಕೊಟ್ರಿ ನಂಜಪ್ಪ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಪೂಜ್ಯ ಹೆಗಡೆಯವರು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ, ಧರ್ಮಸ್ಥಳ ಸಂಸ್ಥೆಯಿಂದ ನೂತನವಾಗಿ ಅಭಿವೃದ್ಧಿ ಪಡಿಸಿರುವ ಕೆರೆಗಳ ಹಸ್ತಾಂತರ ಕಾರ್ಯಕ್ರಮವನ್ನ ಪೂಜ್ಯರು ನೆರವೇರಿಸುವರು.

ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್

ಕರ್ನಾಟಕ ಜನಜಾಗೃತಿ ವೇದಿಕೆ ಚಿತ್ರದುರ್ಗ ಜಿಲ್ಲಾಧ್ಯಕ್ಷ ಬಿ.ಪಿ ಓಂಕಾರಪ್ಪ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ಹಳ್ಳಿಯ ಜನಸಾಮಾನ್ಯರಿಗೂ ತಲುಪಿದ್ದು, ಪೂಜ್ಯ ವೀರೇಂದ್ರ ಹೆಗ್ಡೆಯವರ ಸೇವೆ ಅನನ್ಯವಾದದ್ದು.

ಶಾಲಾ ಕಾಲೇಜುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಕ್ಕೆ ತುತ್ತಾಗಿ ಯುವಕರು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಂಟು ಕಡೆ ಶಾಲಾ ಕಾಲೇಜುಗಳಲ್ಲಿ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಮಾಡಿ, ವಿದ್ಯಾರ್ಥಿಗಳಲ್ಲಿ ಪರಿವರ್ತನೆ ಮಾಡುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

ಕ್ಲಿಕ್ ಮಾಡಿ ಓದಿ: ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವು | ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಹಿರಿಯೂರು ಜಿಲ್ಲಾ ಯೋಜನಾ ನಿರ್ದೇಶಕ ವಿನಯ್ ಕುಮಾರ್ ಸುವರ್ಣ, ಜಿಲ್ಲಾ ಜನಜಾಗೃತಿ ವೇದಿಕೆ ನಿರ್ದೇಶಕ ನಾಗರಾಜ್, ಜನ ಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ್ ಹಾಗೂ ಜನಜಾಗೃತಿ ವೇದಿಕೆ ಸದಸ್ಯರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version