
CHITRADURGA NEWS | 21 DECEMBER 2025
ಚಿತ್ರದುರ್ಗ: ಜಿಲ್ಲಾಡಳಿತದ ವತಿಯಿಂದ 2026ರ ಜನವರಿ 01ರಂದು ಜಿಲ್ಲಾ ಕೇಂದ್ರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಮಹೆಬೂಬ್ ಜೀಲಾನಿ ಖುರೇಷಿ ಹೇಳಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 20 | ಭೀಮಸಮುದ್ರ, ಚನ್ನಗಿರಿ, ದಾವಣಗೆರೆ ಅಡಿಕೆ ರೇಟ್

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜನವರಿ 01ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು. ಸರ್ಕಾರದ ಶಿಷ್ಟಾಚಾರ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು.
ಕಲಾವಿದರಿಂದ ಗೀತಗಾಯನ ಮತ್ತು ಸಮಾರಂಭದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ನ್ಯಾಯಾವಾದಿ ಕೂಟ್ರಪ್ಪರವರ ಪುತ್ರ ಬಸವರಾಜು ನಿಧನ
ಅಮರಶಿಲ್ಪಿ ಜಕಣಾಚಾರಿ ಅವರು ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಅಪಾರವಾದ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಸಂಸ್ಮರಣಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಮಾಜದವರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಸಮಾಜದ ಇಬ್ಬರು ಸಾಧಕರಿಗೆ ಸನ್ಮಾನ ಹಾಗೂ ಸಮಾಜದ 10 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅವಕಾಶ ಕಲ್ಪಿಸಿಕೊಡುವಂತೆ ಸಮಾಜದ ಮುಖಂಡರು ಕೋರಿದರು.
ಇದನ್ನೂ ಓದಿ: ಸುತ್ತೂರು ಜಾತ್ರೆಯ ಪ್ರಚಾರ ರಥ ಚಿತ್ರದುರ್ಗಕ್ಕೆ ಆಗಮನ | ಮುರುಘಾ ಮಠದಲ್ಲಿ ಸ್ವಾಗತ
ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಸಮಾಜದ ಮುಖಂಡರಾದ ಕೆ.ಟಿ.ಸುರೇಶ್, ಎ.ಶಂಕರಾಚಾರ್, ಮಲ್ಲಿಕಾರ್ಜುನಾಚಾರ್, ರವಿಶಂಕರ್, ಸಿ.ಆರ್.ಸುರೇಶ್, ಸುನಿಲ್ ಕುಮಾರ್, ಶಂಕರಮೂರ್ತಿ, ಶಿವಣ್ಣ, ರಾಮಕೃಷ್ಣ ಬಡಿಗೇರ, ಗಾಯಿತ್ರಮ್ಮ, ಪದ್ಮ ಕಾಳಾಚಾರ್, ಹೆಚ್.ಎಸ್.ಟಿ.ಸ್ವಾಮಿ, ಆನಂದಾಚಾರ್ ಸೇರಿದಂತೆ ಮತ್ತಿರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
