CHITRADURGA NEWS | 13 JUNE 2025
ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದಿಂದ 2025-2026ನೇ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Also Read: ಕಾರಿನ ಗ್ಲಾಸ್ ಹೊಡೆದು 4.75 ಲಕ್ಷ ಕಳವು | ಹಿರಿಯೂರು ನಗರದಲ್ಲಿ ಘಟನೆ
ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಒಕ್ಕಲಿಗ ಸಮುದಾಯ ಮತ್ತು ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಆಸಕ್ತರು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ, ಅರಿವು ಶೈಕ್ಷಣಿಕ ಸಾಲ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ https://sevasindhu.karnataka.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದ್ದು, ಹೆಚ್ಚಿನ ಯೋಜನೆಗಳ ಮಾರ್ಗಸೂಚಿ, ಅಗತ್ಯ ವಿರುವ ಶೈಕ್ಷಣಿಕ ಅರ್ಹತೆ, ವಯೋಮಾನ, ಕುಟುಂಬ ಆದಾಯಮಿತಿ, ಸಹಾಯಧನ ಸೇರಿದಂತೆ ಇತರೆ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kvcdc.karnataka.gov.in ನಲ್ಲಿ ಸಂಪರ್ಕಿಸಬಹುದು, ನಿಗಮದ ದೂರವಾಣಿ ಸಂಖ್ಯೆ 08194-220882 ಗೆ ಕರೆ ಮಾಡಿ ವಿಚಾರಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number