ವೋಟರ್ ಕಾರ್ಡ್‌ ಇಲ್ಲ ಅಂದ್ರು ವೋಟ್ ಮಾಡಿ | ಈ ದಾಖಲೆ ಇರಲಿ

election card

CHITRADURGA NEWS | 24 APRIL 2024
ಚಿತ್ರದುರ್ಗ: ಪ್ರಜಾಪ್ರಭುತ್ವದ ಹಬ್ಬವಾದ ಮತದಾನದ ದಿನದಂದು ಎಲ್ಲಾ ಅರ್ಹ ಮತದಾರರು ತಪ್ಪದೇ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಬೇಕು. ಈ ವೇಳೆ ಮತ ಚಲಾಯಿಸಲು ಎಪಿಕ್ ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಅದರ ಬದಲು ಈ ದಾಖಲೆಗಳಿದ್ದರೆ ಸಾಕು ನೀವು ಮತಚಲಾಯಿಸಬಹುದು.

ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್‌ ಕಾರ್ಡ್‌ ಹೊರತುಪಡಿಸಿ 12 ಅನುಮೋದಿತ ದಾಖಲೆಗಳನ್ನು ಗುರುತಿನ ಚೀಟಿಯಾಗಿ ಬಳಸಿ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದೆ.

ಕ್ಲಿಕ್ ಮಾಡಿ ಓದಿ: ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ

ಮತದಾರನು ಎಪಿಕ್ ಇಲ್ಲದೇ ಹೋದಲ್ಲಿ ಅದರ ಬದಲಾಗಿ ಆಧಾರ್‌, ನರೇಗಾ ಜಾಬ್‌ ಕಾರ್ಡ್‌, ಬ್ಯಾಂಕ್‌, ಅಂಚೆ ಕಚೇಯ ಭಾವಚಿತ್ರವುಳ್ಳ ಪಾಸ್‌ಬುಕ್‌, ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮಾ ಕಾರ್ಡ್‌, ಚಾಲನಾ ಪರವಾನಗಿ, ವಿಶೇಷಚೇತನರ ಗುರುತಿನ ಚೀಟಿ, ಪಾನ್‌ಕಾರ್ಡ್‌, ಎನ್‌ಪಿಆರ್‌ ಅಡಿಯಲ್ಲಿ ಆರ್‌ಜಿಐ ನ ಸ್ಮಾರ್ಟ್‌ಕಾರ್ಡ್, ಭಾರತೀಯ ಪಾಸ್‌ಪೋರ್ಟ್‌, ಭಾವಚಿತ್ರ ಇರುವ ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ ಹಾಗೂ ಎಂಪಿ, ಎಂಎಲ್‌ಎ ಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳನ್ನು ಬಳಸಿ ಮತದಾನ ಚಲಾಯಿಸಬಹುದು ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version