
CHITRADURGA NEWS | 11 MARCH 2026
ಚಿತ್ರದುರ್ಗ: ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ವೈದ್ಯರ ಮುಷ್ಕರ | OPD ಬಂದ್ | ಬೇಡಿಕೆಗಳ ಈಡೇರಿಕೆಗೆ ವೈದ್ಯರಿಂದ ಸರ್ಕಾರಕ್ಕೆ ಪಟ್ಟು
2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆಯು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಪ್ರಗತಿಯಲ್ಲಿದೆ. 2025ರ ಸೆಪ್ಟೆಂಬರ್ ಮಾಹೆಯಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಕೆಲವು ಮತಗಟ್ಟೆ ಮಟ್ಟದ ಅಧಿಕಾರಿಗಳು ಶೇ.50 ರಿಂದ 80ರಷ್ಟು ಪೂರ್ಣಗೊಳಿಸಿದ್ದು, ಇನ್ನೂ ಬಾಕಿ ಇರುವ ಮತದಾರರ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು.
ಇದನ್ನೂ ಓದಿ: ದ್ವಿತೀಯ PUC ಅರ್ಥಶಾಸ್ತ್ರ ಪರೀಕ್ಷೆ | 6364 ವಿದ್ಯಾರ್ಥಿಗಳು ಹಾಜರು, 296 ವಿದ್ಯಾರ್ಥಿಗಳು ಗೈರು
ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಬಾಕಿ ಉಳಿಸಿಕೊಂಡು ನಿರ್ಲಕ್ಷ್ಯ ತೋರುವ ಮತಗಟ್ಟೆ ಮಟ್ಟದ ಅಧಿಕಾರಿಗಳ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
