CHITRADURGA NEWS | 16 MARCH 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಚುನಾವಣೆ 2ನೇ ಹಂತದಲ್ಲಿ ನಡೆಯಲಿದೆ. ಮಾರ್ಚ್ 16 ಚುನಾವಣೆ ಘೋಷಣೆಯಾಗಿದ್ದು, ಮಾರ್ಚ್ 28ರಂದು ಅಧಿಸೂಚನೆ ಹೊರ ಬೀಳಲಿದೆ. ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನ. ಏಪ್ರಿಲ್ 5 ನಾಮಪತ್ರಗಳ ಪರಿಶೀಲನೆ. ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಕಡೆಯದಿನ. ಏಪ್ರಿಲ್ 26 ಕ್ಕೆ ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: https://chitradurganews.com/date-fixed-for-lok-samara-a-26-voting-on-may-7/
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26, ಉತ್ತರ ಕರ್ನಾಟಕದಲ್ಲಿ ಹಾಗೂ ಮೇ 7ಕ್ಕೆ ಮತದಾನ ನಡೆಯಲಿದೆ.

ಕ್ಲಿಕ್ ಮಾಡಿ ಓದಿ: https://chitradurganews.com/farmers-struggle-to-save-crops/
ಚಿತ್ರದುರ್ಗ ಜಿಲ್ಲೆಯಲ್ಲಿ 14,18,211 ಮತದಾರರು ಇದ್ದಾರೆ. 7,04,896 ಪುರುಷರು ಹಾಗೂ 7,13,228 ಮಹಿಳಾ ಮತದಾರರು ಮತ್ತು 87 ಇತರೆ ಮತದಾರರು ಸೇರಿ ಒಟ್ಟು 14,18,211 ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,661 ಮತಗಟ್ಟೆಗಳಿವೆ. ಮತದಾರರ ಅಂತಿಮ ಪಟ್ಟಿಯಲ್ಲಿ 18-19 ವರ್ಷ ವಯೋಮಿತಿಯ ಯುವ ಮತದಾರರು 35,683 ಮಂದಿ ಇದ್ದಾರೆ.
ಮೊಳಕಾಲ್ಮುರು: 2,49,252, ಚಳ್ಳಕೆರೆ: 2,22,560, ಚಿತ್ರದುರ್ಗ: 2,64,248, ಹಿರಿಯೂರು: 2,45,728, ಹೊಸದುರ್ಗ: 1,99,457 ಹಾಗೂ ಹೊಳಲ್ಕೆರೆ ಕ್ಷೇತ್ರದಲ್ಲಿ 2,36,966 ಮತದಾರರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
