
CHITRADURGA NEWS | 18 AUGUST 2025
ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ.
ಮಳೆ ಹೆಚ್ಚಾಗಿದ್ದು, ಭದ್ರಾ ಜಲಾಶಯದಿಂದಲೂ ನೀರು ಹರಿದು ಬರುತ್ತಿದ್ದು, ಕಳೆದ ಮೂರು ದಿನಗಳಿಗೆ ಹೋಲಿಕೆ ಮಾಡಿದಾಗ ಇಂದಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಇದನ್ನೂ ಓದಿ: ಶಾಲೆ, ಅಂಗನವಾಡಿಗಳಿಗೆ ರಜೆ |ಜಿಟಿ ಜಿಟಿ ಮಳೆ | ಜಿಲ್ಲಾಡಳಿತ ಘೋಷಣೆ
ಅಗಸ್ಟ್ 17 ರಂದು ಜಲಾಶಯಕ್ಕೆ 700 ಕ್ಯೂಸೆಕ್ ನೀರು ಹರಿದು ಬಂದಿತ್ತು. ಆದರೆ, ಆಗಸ್ಟ್ 18 ರಂದು ಬೆಳಗ್ಗೆ 8 ಗಂಟೆಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 1200 ಕ್ಯೂಸೆಕ್ ನೀರು ಹರಿದು ಬಂದಿದೆ.
30 ಟಿಎಂಸಿ ಸಾಮರ್ಥ್ಯದ ವಾಣಿವಿಲಾಸ ಸಾಗರ ಜಲಾಶಯ130 ಅಡಿವರೆಗೆ ನೀರು ಸಂಗ್ರಹಿಸಲಿದೆ. ಸದ್ಯ ಜಲಾಶಯದಲ್ಲಿ 26.31 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, 125.10 ಅಡಿವರೆಗೆ ನೀರು ನಿಂತಿದೆ.
ಇದನ್ನೂ ಓದಿ: ಮಹಿಳೆ ಮೇಲೆ ಚಿರತೆ ದಾಳಿ | ಮೆಕ್ಕೆಜೋಳಕ್ಕೆ ಗೊಬ್ಬರ ಹಾಕುವಾಗ ಘಟನೆ
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 116.65 ಅಡಿ ನೀರಿದ್ದು, ಒಟ್ಟು 19.97 ಟಿಎಂಸಿ ನೀರಿನ ಸಂಗ್ರಹ ಇತ್ತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

