
CHITRADURGA NEWS | 09 JANUARY 2025
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ 700 ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು, ವಾಣಿವಿಲಾಸ ಸಾಗರ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರು ಯಾವುದೇ ಸಂದರ್ಭದಲ್ಲಾದರೂ ಕೋಡಿಯ ಮುಖಾಂತರ ವೇದಾವತಿ ನದಿಗೆ ಹರಿಯುತ್ತದೆ.
ಇದನ್ನೂ ಓದಿ: ವಾಣಿವಿಲಾಸ ಸಾಗರ ಜಲಾಶಯ ಇಂದಿನ ಮಟ್ಟ 129.90 ಅಡಿ
ಹಾಗಾಗಿ ವೇದಾವತಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ಹಿರಿಯೂರು ಕ್ಯಾಂಪ್ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಭದ್ರಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

