
CHITRADURGA NEWS | 08 OCTOBER 2025
ಚಿತ್ರದುರ್ಗ: ಪ್ರತಿಯೊಬ್ಬರೂ ನಿಸರ್ಗದ ನಿಯಮಗಳ ಪರಿಪಾಲಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ಪರಿಸರ, ಪ್ರಕೃತಿ, ಅರಣ್ಯ ಹಾಗೂ ವನ್ಯಜೀವಿಗಳ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ಹೊಂದಬೇಕು ಎಂದು ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ 112 ಹೊಸ ಮತಗಟ್ಟೆಗಳ ಸ್ಥಾಪನೆಗೆ ಶಿಫಾರಸ್ಸು | ಬಿ.ಟಿ. ಕುಮಾರಸ್ವಾಮಿ

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಕರ್ನಾಟಕ ಅರಣ್ಯ ಇಲಾಖೆ ಚಿತ್ರದುರ್ಗ ಜಿಲ್ಲಾ ವಿಭಾಗ, ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ, ವಿವಿಧ ಶಾಲಾ- ಕಾಲೇಜು ಸಹಯೋಗದೊಂದಿಗೆ 71ನೇ ವನ್ಯಜೀವಿ ಸಪ್ತಾಹ-2025 ರ ಅಂಗವಾಗಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ವನ್ಯಜೀವಿಗಳೊಂದಿಗೆ ಸಹಬಾಳ್ವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಿದ್ದ ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.
ಮನೆಯಲ್ಲಿ ಹಣ್ಣುಗಳನ್ನು ತಿಂದ ಮೇಲೆ ಬೀಜಗಳನ್ನು ತಿಪ್ಪೆಗೆ ಹಾಕುವ ಬದಲು ಕಾಡಿಗೆ ಹಾಕಿ ವನ್ಯಜೀವಿಗಳಿಗೆ ಆಹಾರವಾಗಲಿ ಎಂದರು.
ವನ್ಯಜೀವಿ ಸಪ್ತಾಹದಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ, ಅರಣ್ಯ ಮತ್ತು ವನ್ಯಜೀವಿಗಳ ಉಳಿವಿಗೆ ನಿರಂತರ ಪ್ರಯತ್ನ ಅಗತ್ಯ. ಈ ಕಾಲ್ನಡಿಗೆ ಜಾಥಾ ಜನರಲ್ಲಿ ಅರಣ್ಯ, ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗಿದೆ. ಅರಣ್ಯ ಇಲ್ಲದಿದ್ದರೆ ಜಾಗತಿಕ ತಾಪಮಾನ ಹೆಚ್ಚಾಗಿ ವನ್ಯಜೀವಿಗಳು ಮತ್ತು ಪಕ್ಷಿಗಳು ನಾಶವಾಗುತ್ತವೆ ಎಂದು ತಿಳಿಸಿದರು.
ಇದನ್ನೂ ಓದಿ: ವೀರಶೈವ ಅರ್ಬನ್ ಬ್ಯಾಂಕ್ ರಜತ ಭವನ ನಿರ್ಮಾಣ | ಸಮಿತಿ ಅಧ್ಯಕ್ಷರಾಗಿ ಜೆ.ಎಂ.ಜಯಕುಮಾರ್
ವಲಯ ಅರಣ್ಯ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ನಾವು ಅರಣ್ಯ ಮತ್ತು ವನ್ಯಜೀವಿಗಳ ಜೊತೆಯೇ ಬಾಳುವುದನ್ನು ಕಲಿಯಬೇಕು. ಆಗ ಮಾತ್ರ ಪ್ರಕೃತಿ ಮತ್ತು ಪರಿಸರ ಸಮತೋಲನದಿಂದ ಇರಲು ಸಾಧ್ಯ. ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ನಾವು ಪಣತೊಡಬೇಕು ಎಂದು ವನ್ಯಜೀವಿ ಸಪ್ತಾಹ ಆಚರಣೆಯ ಉದ್ದೇಶ ತಿಳಿಸಿದರು.
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಮಾಲತೇಶ್ ಅರಸ್ ಮಾತನಾಡಿ, ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಿದಾಗ ಮಾತ್ರ ಪ್ರಕೃತಿ, ಪರಿಸರ ಉಳಿಯಲು ಸಾಧ್ಯ. ಇದರಿಂದ ಪರಿಸರ ಸಮತೋಲನ ಕಾಯ್ದುಕೊಳ್ಳಬಹುದು.
ಅರಣ್ಯಕ್ಕೆ ನಾವು ಯಾವುದೇ ಹಾನಿ ಉಂಟು ಮಾಡದೇ ಸಸ್ಯ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಂದು ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಸಂರಕ್ಷಿಸಬೇಕು.
ಪ್ರತಿಯೊಬ್ಬರೂ ಅರಣ್ಯ ಇಲಾಖೆಯ ಇಂಥಹ ಜನ ಜಾಗೃತಿ ಕಾರ್ಯಕ್ರಮಕ್ಕೆ ಸಹಕರಿಸಬೇಕು ಎಂದರು.
ಇದನ್ನೂ ಓದಿ: ಯುವತಿ ನಾಪತ್ತೆ | ಪತ್ತೆಗೆ ಭರಮಸಾಗರ ಪೊಲೀಸರ ಮನವಿ
ವನ್ಯಜೀವಿ ಸಪ್ತಾಹ ಜಾಥಾ ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾಗಿ ಅಂಬೇಡ್ಕರ್ ಸರ್ಕಲ್, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮುಖ್ಯ ರಸ್ತೆಯ ಮೂಲಕ ಗಾಂಧಿ ವೃತ್ತ ಕ್ರಮಿಸಿ ನಂತರ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಸಮಾಪನಗೊಂಡಿತು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಹಾಗೂ ಪರಿಸರ ಸಂರಕಣೆಗೆ ಸಂಬಂಧಿಸಿದ ವಿವಿಧ ಘೋಷಣಾ ಫಲಕಗಳನ್ನು ಹಿಡಿದ ನೂರಾರು ವಿದ್ಯಾರ್ಥಿಗಳು ನಾಗರಿಕರಲಿ ಅರಣ್ಯ, ಮತು ವನ್ಯಜೀವಿಗಳ ಸಂರಕಣೆ ಬಗ್ಗೆ ಜಾಗೃತಿ ಮೂಡಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ತಹಶೀಲ್ದಾರ್ ಗೋವಿಂದ ರಾಜ್, ತಾಪಂ ಇಒ ರವಿಕುಮಾರ್, ಬಿಇಒ ಗಿರಿಜಾ, ಉಪ ವಲಯ ಅರಣ್ಯ ಅಧಿಕಾರಿ ರಾಮದಾಸ್ ಚವ್ವಾಣ್, ದಾದಾಪೀರ್, ರಶ್ಮಿ, ಬೀಟ್ ಫಾರೆಸ್ಟರ್ ಸಂತೋಷ್ ಕುಮಾರ್, ಸಿ.ಮೇಘನಾ, ಹೆಚ್.ಟಿ.ಪ್ರಭು ಶಂಕರ್, ಚಾಂದ್ ಫಲ್ಟನ್ ಮತ್ತು ಕಣುಮಪ್ಪ, ಅರಣ್ಯ ವೀಕ್ಷಕ ಕನಕಪ್ಪ ಮತ್ತು ಅರಣ್ಯ ಸಿಬ್ಬಂದಿ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
