CHITRADURGA NEWS | 14 November 2026
ಚಿತ್ರದುರ್ಗ: ನಗರದ ಇ-ಖಾತಾ ಹಾಗೂ ಇ-ಸ್ವತ್ತು ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಾರ್ಡ್ವಾರು ವೇಳಾಪಟ್ಟಿ ಪ್ರಕಟಿಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆಯಲ್ಲಿ ಪ್ರತ್ಯೇಕ ಸಹಾಯ ಕೇಂದ್ರ ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ತಿಳಿಸಿದರು.
ಇದನ್ನೂ ಓದಿ: ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | 75 ಸಾಧಕರಿಗೆ ಶಿವಸಂಚಾರ ಪುರಸ್ಕಾರ
ನಗರದ ಏಕನಾಥೇಶ್ವರಿ ಪಾದಗುಡಿ ಆವರಣದಲ್ಲಿ ನಗರಸಭೆಯಿಂದ ಆಯೋಜಿಸಿದ್ದ 1ರಿಂದ 4ನೇ ವಾರ್ಡ್ಗಳ ಸಾರ್ವಜನಿಕ ಕುಂದುಕೊರತೆ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ನಗರ ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು. ಕುಡಿಯುವ ನೀರಿನ ಪೈಪ್ಲೈನ್ ದುರಸ್ತಿ, ಒಳಚರಂಡಿ ನಿರ್ವಹಣೆ ಹಾಗೂ ಪೌರಕಾರ್ಮಿಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಪೌರಾಯುಕ್ತೆ ಲಕ್ಷ್ಮೀ ಮಾತನಾಡಿ, ಇ-ಸ್ವತ್ತು ಪಡೆಯಲು ಮಧ್ಯವರ್ತಿಗಳ ಅವಶ್ಯಕತೆಯಿಲ್ಲ. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದರೆ ಐದು ದಿನಗಳಲ್ಲಿ ಮನೆ ಬಾಗಿಲಿಗೆ ಇ-ಸ್ವತ್ತು ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ವಾರ್ಡ್ ಸಭೆಯಲ್ಲಿ ಸ್ವೀಕರಿಸಿದ ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾಜಿ ನಗರಸಭೆ ಅಧ್ಯಕ್ಷ ಹೆಚ್.ಟಿ. ಕೃಷ್ಣಮೂರ್ತಿ ಮಾತನಾಡಿ, ನಗರಸಭೆಯಲ್ಲಿ ಸಾರ್ವಜನಿಕರ ಕಡತಗಳು ತಿಂಗಳುಗಟ್ಟಲೆ ಬಾಕಿ ಉಳಿಯುತ್ತಿವೆ. ಆಡಳಿತ ಚುರುಕುಗೊಳಿಸಬೇಕು. ಮಾರಿಕಣಿವೆ ಜಲಾಶಯದಿಂದ ಎರಡನೇ ಹಂತದ ಕುಡಿಯುವ ನೀರಿನ ಯೋಜನೆಗೆ ಆದ್ಯತೆ ನೀಡಬೇಕು. ಬಾಕಿ ಇರುವ 84 ಪೌರಕಾರ್ಮಿಕರ ನೇಮಕಾತಿ ಪೂರ್ಣಗೊಳಿಸಿ, ಬೀದಿನಾಯಿ ಹಾಗೂ ಹಂದಿಗಳ ಹಾವಳಿ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 14 | ಹತ್ತಿ ರೇಟ್ ಎಷ್ಟಿದೆ?
ಸಭೆಯಲ್ಲಿ ನಗರಸಭೆ ಪರಿಸರ ಅಭಿಯಂತರ ಜಾಫರ್, ಅಧಿಕಾರಿಗಳು, ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ನಾಲ್ಕು ವಾರ್ಡ್ಗಳ ನಿವಾಸಿಗಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

