
CHITRADURGA NEWS | 08 AUGUST 2024
ಚಿತ್ರದುರ್ಗ: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅನ್ನೇಹಾಳ್ ಜಂಪಯ್ಯನಹಟ್ಟಿಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ (ಜೂನಿಯರ್ ವಾರ್ಡನ್) ಮರಾಠಿ ಲಕ್ಷ್ಮೀದೇವಿಯನ್ನು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಜುಲೈ 12 ರಂದು ರಾತ್ರಿ 8.30ಕ್ಕೆ ವಿದ್ಯಾರ್ಥಿನಿಲಯದ ಮಕ್ಕಳು ಊಟ ಮಾಡಿದ ಬಳಿಕ ನೀರು ಸೇವಿಸಿದ್ದಾರೆ. ಕೆಲ ಸಮಯಕ್ಕೆ 8 ರಿಂದ 9 ಮಕ್ಕಳು ಅಸ್ವಸ್ತಗೊಂಡಿದ್ದಾರೆ. ಕೂಡಲೇ ಗೊಡಬನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬುಲೆನ್ಸ್‌ನಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಿಸಲಾಗಿದೆ.
ಇದನ್ನು ಓದಿ: ವಿವಿ ಸಾಗರಕ್ಕೆ ಹರಿದು ಬಂತು 2195 ಕ್ಯೂಸೆಕ್ ನೀರು

13 ರಂದು ಆರೋಗ್ಯ ಸುರಕ್ಷತಾ ಅಧಿಕಾರಿಗಳು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳಿಗೆ ಕುಡಿಯಲು ಕಾಯಿಸಿ ಆರಿಸಿದ ನೀರನ್ನು ಕೊಡಲು ಸೂಚಿಸಿದ್ದಾರೆ. ಜತೆಗೆ ನಿಲಯವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ತಿಳಿಸಿದ್ದು, ಪ್ರಕರಣ ಮರುಕಳಿಸಿದರೆ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪುನಃ ಆಗಸ್ಟ್ 4ರಂದು ವಿದ್ಯಾರ್ಥಿಗಳು ಊಟ ಸೇವಿಸಿದ ಬಳಿಕ ಅಸ್ವಸ್ತರಾಗಿದ್ದಾರೆ. ವಿದ್ಯಾರ್ಥಿ ನಿಲಯದ ನಿರ್ವಹಣೆ ಹಾಗೂ ಕರ್ತವ್ಯ ಲೋಪ ಕಂಡು ಬಂದಿದೆ. ವಾರ್ಡನ್ ಮರಾಠಿ ಲಕ್ಷ್ಮೀದೇವಿ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಕೋರಿದ್ದಾರೆ.
ಕರ್ತವ್ಯ ನಿರ್ಲಕ್ಷ ಕಂಡು ಬಂದ ಕಾರಣ ಆಗಸ್ಟ್ 8ರಂದು ವಾರ್ಡನ್ ಮರಾಠಿ ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
