ಮುಖ್ಯ ಸುದ್ದಿ
Hospital: ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಯಾಕೆ ಕಳಿಸ್ತಿರಾ | ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತರಾಟೆ
CHITRADURGA NEWS | 14 OCTOBER 2024
ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಿಗೆ (Hospital) ಬರುವ ಬಹುತೇಕರು ಬಡವರೇ ಆಗಿರುತ್ತಾರೆ. ಅವರಿಗೆ ಇಲ್ಲಿ ಸೂಕ್ತ ಚಿಕಿತ್ಸೆ, ಆಪರೇಷನ್ ಮಾಡದೆ ಬಸವೇಶ್ವರ, ದಾವಣಗೆರೆ, ಮಣಿಪಾಲ, ಬೆಂಗಳೂರು ಆಸ್ಪತ್ರೆಗಳಿಗೆ ರೆಫರಲ್ ಯಾಕೆ ಮಾಡುತ್ತೀರಿ ಎಂದು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ
ಸಚಿವ ಡಿ.ಸುಧಾಕರ್ ಮಾತನಾಡಿ, ಸರ್ಕಾರ ಕೋಟ್ಯಾಂತರ ರೂ.ಗಳನ್ನು ಖರ್ಚು ಮಾಡಿ ಸರ್ಕಾರಿ ಆಸ್ಪತ್ರೆ ನಿರ್ವಹಣೆ ಮಾಡುತ್ತಿದೆ. ಆದರೆ, ಅಲ್ಲಿ ಬಡವರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದರೆ ಏನರ್ಥ. ಯಾಕೆ ರೆಫರ್ ಮಾಡುತ್ತಿರಿ ಎಂದು ಪ್ರಶ್ನಿಸಿದರು.
ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾ ಆಸ್ಪತ್ರೆಯಿಂದ ಸಣ್ಣ ಪುಟ್ಟ ಕಾಯಿಲೆಗೆ ಹೋದ ರೋಗಿಯನ್ನೂ ಸರಿಯಾಗಿ ಚಿಕಿತ್ಸೆ ಕೊಡದೇ ಬಸವೇಶ್ವರ ಆಸ್ಪತ್ರೆ, ಮಣಿಪಾಲ, ದಾವಣಗೆರೆ, ಮಂಗಳೂರು, ಬೆಂಗಳೂರು ಆಸ್ಪತ್ರೆಗಳಿಗೆ ರೆಫರ್ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ ಇದಕ್ಕೆ ಕಡಿವಾಣ ಹಾಕಿ ಇಲ್ಲಿಯೇ ಉತ್ತಮ ಚಿಕಿತ್ಸೆ ನೀಡಬೇಕು ಎಂದರು.
ಇದನ್ನೂ ಓದಿ: ಹೊಸದುರ್ಗದಲ್ಲಿ ಭಾರೀ ಮಳೆ | ಮತ್ತೆ ಮೈದುಂಬಿದ ವೇದಾವತಿ | ಕೆಲ್ಲೋಡು ಬ್ಯಾರೇಜ್ ಭರ್ತಿ
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಆಸ್ಪತ್ರೆಗಳಿಗೆ ಬರುವ ಬಹುತೇಕ ರೋಗಿಗಳು ಬಡವರೇ ಆಗಿರುತ್ತಾರೆ. ಅವರ ಬಳಿ ಹಣ ಇರುವುದಿಲ್ಲ. ಅವರನ್ನು ಮಂಗಳೂರು, ಬೆಂಗಳೂರಿಗೆ ಕಳಿಸಿದರೆ ದೇವರು ನಿಮಗೆ ಒಳ್ಳೆಯದು ಮಾಡುತ್ತಾನಾ ಎಂದು ಡಿಎಚ್‍ಓ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ಪ್ರಶ್ನಿಸಿದರು.
ಕೋವಿಡ್ ಖರ್ಚು ವೆಚ್ಚದ ಲೆಕ್ಕ ಕೊಡಿ:
ಮುಂದಿನ ಕೆಡಿಪಿ ಸಭೆಯಲ್ಲಿ ಕೋವಿಡ್ ವೇಳೆ ಚಿತ್ರದುರ್ಗ ಜಿಲ್ಲೆಯ ಎಲ್ಲ ಆಸ್ಪತ್ರೆಗಳಿಗೆ ಸರ್ಕಾರದಿಂದ ಎಷ್ಟು ಅನುದಾನ ಬಂದಿತ್ತು, ಎಷ್ಟು ಖರ್ಚಾಗಿದೆ. ಆಗ ಖರೀಧಿಸಿದ ವಸ್ತುಗಳು ಎಲ್ಲಿವೆ, ಸಿಎಸ್‍ಆರ್ ನಿಧಿ ಎಷ್ಟು ಬಂದಿತ್ತು ಎಲ್ಲ ವಿವರಗಳನ್ನು ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಡಿ.ಸುಧಾಕರ್ ಹಾಗೂ ಶಾಸಕ ಚಂದ್ರಪ್ಪ ಸೂಚಿಸಿದರು.