Connect with us

    ಬಾನಾಡಿಗಳ ಬಾಯಾರಿಕೆಗೆ ನೀರೆರೆದ ಜಿಪಂ ಸಿಇಓ | ಮರ ಮರದಲ್ಲೂ ನೀರು, ಕಾಳಿನ ವ್ಯವಸ್ಥೆ

    ZP plastic bowl for birds

    ಮುಖ್ಯ ಸುದ್ದಿ

    ಬಾನಾಡಿಗಳ ಬಾಯಾರಿಕೆಗೆ ನೀರೆರೆದ ಜಿಪಂ ಸಿಇಓ | ಮರ ಮರದಲ್ಲೂ ನೀರು, ಕಾಳಿನ ವ್ಯವಸ್ಥೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 17 MARCH 2025

    ಚಿತ್ರದುರ್ಗ: ಬಿಸಿಲ ಧಗೆಗೆ ಪ್ರಾಣಿ-ಪಕ್ಷಿಗಳು ಬಾಯಾರಿ ಬಳಲುತ್ತಿರುತ್ತವೆ. ಮಡಿಕೆ-ಕುಡಿಕೆಯಲ್ಲಿ ನೀರಿಡಿ. ಪ್ರಾಣಿ, ಪಕ್ಷಿಗಳ ದಾಹ ನೀಗಿಸಿ ಎಂಬ ಸಂದೇಶಗಳು ಬೇಸಿಗೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣಿಗೆ ಬೀಳುತ್ತವೆ.

    ಆದರೆ. ಇದನ್ನು ಅಕ್ಷರಶಃ ಕಾರ್ಯಗತಗೊಳಿಸುವ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಪಕ್ಷಿ ಪ್ರೇಮ ಮೆರೆದಿದ್ದಾರೆ.

    ಇದನ್ನೂ ಓದಿ: ಜಿಲ್ಲೆಯ ಜನರಿಗೆ ಎಚ್ಚರಿಕೆ ‌| ಮಿತಿಮೀರಿದ ತಾಪಮಾನ | ಈ‌ ಸಲಹೆ ಪಾಲಿಸಿ..

    ಕೋಟೆನಾಡು ಚಿತ್ರದುರ್ಗದಲ್ಲಿ ಈ ಬಾರಿ ಬಿಸಿಲಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳಿನಲ್ಲಿ ಕಂಡುಬರುತ್ತಿದ್ದ ಬಿರು ಬೇಸಿಗೆ, ಈ ಬಾರಿ ಮಾರ್ಚ್ ತಿಂಗಳಿನಲ್ಲಿಯೇ ತನ್ನ ಪ್ರತಾಪ ತೋರಲು ಆರಂಭಿಸಿದೆ.

    ಈ ಹಿನ್ನಲೆಯಲ್ಲಿ ಪಕ್ಷಿಗಳ ಹಸಿವು ನೀಗಿಸುವ ಹಾಗೂ ದಾಹ ತಣಿಸುವ ಪ್ರಯತ್ನವೊಂದು ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದಿದೆ.

    ಇದನ್ನೂ ಓದಿ: ನಾಯಕನಹಟ್ಟಿ ಜಾತ್ರೆಯ ದೃಶ್ಯ ವೈಭವ | ಇಡೀ ಜಾತ್ರೆ ಕಣ್ತುಂಬಿಕೊಳ್ಳುವ ಸುಂದರ ಪೋಟೋಗಳು

    ಬೇಸಿಗೆಯಲ್ಲಿನ ತಾಪಮಾನ ನಿಧಾನವಾಗಿ ಏರಿಕೆಯಾಗುತ್ತಿದೆ. ಪರಿಣಾಮ ನೀರಿನ ಸೆಲೆಗಳು ಬತ್ತಲಾರಂಭಿಸಿವೆ. ಬೇಸಿಗೆಯಲ್ಲಿ ಸಾಮಾನ್ಯವಾಗಿ ಜನರೊಂದಿಗೆ ಪ್ರಾಣಿ, ಪಕ್ಷಿಗಳು ಸಹ ಬಿಸಿಲಿನ ತಾಪಕ್ಕೆ ಸಿಲುಕಿ ಕಂಗಲಾಗುವುದು ಸಹಜ.

    ಹೀಗಾಗಿ ಪ್ರಾಣಿ-ಪಕ್ಷಿಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುವುದು ಅಸಾಮಾನ್ಯವೇನಲ್ಲ. ಮನುಷ್ಯರಿಗೆ ನೀರಡಿಕೆಯಾದರೆ ಎಲ್ಲಿಂದಾದರೂ ನೀರು ಪಡೆದು ಕುಡಿಯುತ್ತೇವೆ. ಆದರೆ ಮೂಕ ಪ್ರಾಣಿ-ಪಕ್ಷಿಗಳಿಗೆ ಎಲ್ಲಿ ನೀರು ಸಿಗುತ್ತದೆಯೋ ಎಂದು ಹುಡುಕಿಕೊಂಡು ಅಲೆದಾಡಬೇಕು. ಬೇಸಿಗೆಯ ಬೇಗೆಯಲ್ಲಿ ಪಕ್ಷಿಗಳು ಆಹಾರ, ನೀರಿಗಾಗಿ ಅವುಗಳು ಪಡುವ ವೇದನೆ ಗಮನಿಸಿದ ಜಿ.ಪಂ ಸಿಇಒ ಮಾನವೀಯತೆ ಮೆರೆದಿದ್ದಾರೆ.

    ಇದನ್ನೂ ಓದಿ: ನಾಯಕನಹಟ್ಟಿ ಮುಕ್ತಿ ದೊಡ್ಡ ಮೊತ್ತಕ್ಕೆ ಹರಾಜು | ಈ ಬಾರಿ ಯಾರಿಗೆ ಒಲಿಯಿತು ಮುಕ್ತಿ ಭಾವುಟ ?

    ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಗಿಡ-ಮರಗಳಿಗೆ ಮತ್ತು ಕಾರ್ಯಾಲಯದ ಮಹಡಿ ಮೇಲೆ ತಮ್ಮ ಸ್ವಂತ ಹಣದಲ್ಲಿ ಪ್ಲಾಸ್ಟಿಕ್ ಬೌಲ್‍ಗಳನ್ನು ನೇತು ಹಾಕಿ, ಒಂದರಲ್ಲಿ ನೀರು, ಇನ್ನೊಂದರಲ್ಲಿ ವಿವಿಧ ಬಗೆಯ ಧಾನ್ಯ, ಕಾಳುಗಳನ್ನು ಹಾಕಿದ್ದಾರೆ. ಇದರಿಂದಾಗಿ ಪಕ್ಷಿಗಳು ಬಂದು ಆಹಾರ ತಿಂದು, ನೀರನ್ನು ಕುಡಿದು, ಹಸಿವು ಹಾಗೂ ದಣಿವು ನೀಗಿಸಿಕೊಳ್ಳುತ್ತಿದ್ದು, ಇದರಿಂದಾಗಿ ಜಿಲ್ಲಾ ಪಂಚಾಯಿತಿ ಆವರಣ ಪಕ್ಷಿಗಳ ಚಿಲಿಪಿಲಿ, ಕಲರವದಿಂದ ಕೂಡಿದೆ.

    ಇದನ್ನೂ ಓದಿ: ಜನಸಾಗರದಲ್ಲಿ ರಾಜಗಾಂಭೀರ್ಯದಲ್ಲಿ ಸಾಗಿದ ನಾಯಕನಹಟ್ಟಿ ತೇರು | ಅದ್ದೂರಿ ರಥೋತ್ಸವಕ್ಕೆ ಅಸಂಖ್ಯ ಭಕ್ತರು

    zp ceo somashekhar

    ಜಿಪಂ CEO ಎಸ್.ಜೆ.ಸೋಮಶೇಖರ್

    ಬೇಸಿಗೆಯಲ್ಲಿ ಜನಸಾಮಾನ್ಯರಿಗೂ ಸಹ ಕುಡಿಯುವ ನೀರಿನ ಬವಣೆ ಸಾಮಾನ್ಯ. ಇಂತಹ ಸಂದರ್ಭದಲ್ಲಿ ಪಕ್ಷಿ ಸಂಕುಲಗಳ ಪಾಡು ಹೇಳತೀರದು. ಜನರ ದುರಾಸೆಗೆ ಅನೇಕ ಪ್ರಾಣಿ ಪಕ್ಷಿ ಸಂಕುಲಗಳು ನಾಶವಾಗುತ್ತಿವೆ. ಇಂತಹ ಸಮಯದಲ್ಲಿ ಪ್ರಾಣಿ, ಪಕ್ಷಿಗಳ ಸಂಕುಲವನ್ನು ಉಳಿಸಿ, ಬೆಳೆಸಬೇಕಾದ್ದು ಮಾನವೀಯ ಧರ್ಮವಾಗಿದೆ. ಹೀಗಾಗಿಯೇ ಜಿ.ಪಂ. ಆವರಣದಲ್ಲಿ ಪಕ್ಷಿಗಳ ಹಸಿವು ಹಾಗೂ ನೀರಿನ ದಾಹ ನೀಗಿಸಲು ಗಿಡಮರಗಳಲ್ಲಿ ಪ್ಲಾಸ್ಟಿಕ್ ಬೌಲ್‍ಗಳನ್ನು ನೇತುಹಾಕಿಸಿದ್ದೇನೆ. ಪಕ್ಷಿಗಳು ಇದರಿಂದ ತಮ್ಮ ದಾಹ ನೀಗಿಸುವುದನ್ನು ಕಂಡಾಗ ಖುಷಿಯಾಗುತ್ತದೆ. ಇದೇ ರೀತಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಓ ಗಳು ಮತ್ತು ಪಿಡಿಒ ಗಳು ತಮ್ಮ ವೈಯಕ್ತಿಕ ಹಣದಲ್ಲಿ ಪಕ್ಷಿಗಳ ನೀರಿನ ದಾಹ ನೀಗಿಸಲು ಮುಂದಾಗಬೇಕು.
    | ಎಸ್.ಜೆ.ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top