CHITRADURGA NEWS | 02 AUGUST 2025
ಚಿತ್ರದುರ್ಗ: ಎಲ್ಲಾ ಗ್ರಾಮಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ನೀರು ಮತ್ತು ನೈರ್ಮಲ್ಯ ಸಮಿತಿಗಳನ್ನು ಸಭೆಗಳನ್ನು ನಡೆಸಬೇಕು ಎಂದು ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಸೂಚಿಸಿದರು.
ಇದನ್ನೂ ಓದಿ: ಜಿಲ್ಲೆಯಲ್ಲಿ DJ ಬ್ಯಾನ್ | ಜಿಲ್ಲಾಧಿಕಾರಿ ಆದೇಶ
ನಗರದ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ (ಗ್ರಾಮ್ಸ್) ಸಹಯೋಗದಲ್ಲಿ, ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ (ಕೆ.ಎಸ್.ಆರ್.ಡಬ್ಲ್ಯೂ,ಎಸ್.ಪಿ) ಕುರಿತು ಆಯೋಜಿಸಿದ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರು ಮತ್ತು ನೈರ್ಮಲ್ಯ ಸಭೆಯಲ್ಲಿ ಗ್ರಾಮ ಪಂಚಾಯಿತಿಗಳು ನೀರಿನ ಕಾರ್ಯಚರಣೆ ಹಾಗೂ ನಿರ್ವಹಣೆ ನೀತಿಯನ್ನು ಸೂಕ್ತವಾಗಿ ಅಳವಡಿಸಿಕೊಳ್ಳಬೇಕು.
ಸಭೆಯಲ್ಲಿ 2025-26ನೇ ಸಾಲಿನ ನೀರಿನ ಬಜಟ್ ತಯಾರಿಸುವುದರೊಂದಿಗೆ ಈಗಾಗಲೇ ಘೋಷಣೆ ಮಾಡಿರುವ 24×7 ನೀರು ಸರಬರಾಜು ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಆಗುವಂತೆ ಕ್ರಮ ವಹಿಸಬೇಕು. ಸಭೆಯ ನಡಾವಳಿಯನ್ನು ತಪ್ಪದೇ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸುವುದು ಎಂದರು.
ಇದನ್ನೂ ಓದಿ: ಹಿರಿಯೂರು | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದಯಾನಂದಸ್ವಾಮಿ, ಲಿಂಗರಾಜು, ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ. ಎಸ್.ನಾಡರ್, ಜಿಲ್ಲಾ ಐ.ಇ.ಸಿ.ಸಮಾಲೋಚಕರಾದ ಬಿ.ಸಿ.ನಾಗರಾಜು ಕೆ.ಎಸ್.ಆರ್.ಡಬ್ಲ್ಯೂ,ಎಸ್.ಪಿ ಸಮಾಲೋಚಕ ಕಿರಣ್ ಕುಮಾರ್, ಚಂದ್ರಕಾಂತ್, ಪ್ರವೀಣ್, ಯಲಪ್ಪ, ಗೀತಾ ಲಕ್ಷ್ಮಿ, ಅನುಷ್ಠಾನ ಬೆಂಬಲ ಸಂಸ್ಥೆ (ಗ್ರಾಮ್ಸ್) ತಂಡದ ನಾಯಕರಾದ ನಾಗರಾಜ್, ಪ್ರತಾಪ್ ಸೇರಿದಂತೆ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ಸ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

