CHITRADURGA NEWS | 16 SEPTEMBER 2026
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ಬಲದಂಡೆ ನಾಲೆಯ ಮೂಲಕ ಸುವರ್ಣಮುಖಿ ನದಿಯ 4 ಚೆಕ್ ಡ್ಯಾಂಗಳಿಗೆ ಸೆಪ್ಟೆಂಬರ್ 17 ರಿಂದ 0.10 ಟಿ.ಎಂ.ಸಿ ನೀರನ್ನು ಹರಿಸಲಾಗುತ್ತದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.
ಇದನ್ನೂ ಓದಿ: ಮದ್ಯ-ಮಾದಕ ವಸ್ತುಗಳ ವಿರುದ್ಧ ಜಾಗೃತಿ | ಸೆ.23ರಂದು ಸಾಣೇಹಳ್ಳಿಯಲ್ಲಿ ಪೂರ್ವಭಾವಿ ಸಭೆ
ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ, ಕುಂದಲಗುರ ಬಳಿಯ ವಿತರಣಾ ತೊಟ್ಟಿಯಿಂದ ನದಿಗೆ ನೀರನ್ನು ಹರಿಸಲು ಅಗತ್ಯ ಕ್ರಮ ವಹಿಸಲಾಗಿದೆ.
ಸಾರ್ವಜನಿಕ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಕಾಲುವೆ, ಚೆಕ್ ಡ್ಯಾಂ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ-ಜಾನುವಾರುಗಳನ್ನು ಇಳಿಸುವುದು, ಈಜಾಡುವುದು ಅಥವಾ ಇನ್ನಿತರ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರಕ್ಕೆ ರಾಘವೇಂದ್ರ ಕುಷ್ಟಗಿ ಆಯ್ಕೆ
ಅಲ್ಲದೆ, ನೀರಾವರಿ ಕಾಲುವೆ ಅಥವಾ ಕಟ್ಟಡಗಳನ್ನು ಹಾನಿಗೊಳಿಸುವುದು ಮತ್ತು ಅನಧಿಕೃತವಾಗಿ ಪಂಪ್ಸೆಟ್ಗಳನ್ನು ಅಳವಡಿಸಿ ನೀರು ಎತ್ತುವುದು ನೀರಾವರಿ ಕಾಯ್ದೆಯಡಿ ಅಪರಾಧವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಅಧೀಕ್ಷಕ ಎಂಜಿನಿಯರ್ ಎಚ್ಚರಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

