CHITRADURGA NEWS | 16 JULY 2026
ಚಿತ್ರದುರ್ಗ: ಜಿಲ್ಲೆಯ ಜಲಾಶಯಗಳಿಗೆ ನೀರಿನ ಒಳಹರಿವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಮುಂಬರುವ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಡೆಯಲು ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಗಳನ್ವಯ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರಿಗಾಗಿ ಮೀಸಲಿಡಲಾಗುತ್ತಿದೆ.
ಇದನ್ನೂ ಓದಿ: MLC ಕೆ.ಎಸ್.ನವೀನ್ ಅವರ ಶಾಸಕರ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ
ಜಾಗತಿಕ ‘ಎಲ್-ನಿನೋ’ ಪರಿಣಾಮದಿಂದಾಗಿ ಈ ಬಾರಿ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೂರುವ ಸಾಧ್ಯತೆ ಇರುವುದರಿಂದ, “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಲೇ ರಾಜ್ಯದ ರೈತರಲ್ಲಿ ಮನವಿ ಮಾಡಿದ್ದಾರೆ.
ಜಲಾಶಯದ ನೀರನ್ನು ಅವಲಂಬಿಸಿರುವ ಹಾಗೂ ಅಧಿಕ ನೀರು ಬೇಡುವ ಬೆಳೆಗಳನ್ನು ಸದ್ಯಕ್ಕೆ ಬೆಳೆಯದಂತೆ ರೈತರಲ್ಲಿ ವಿನಂತಿಸಲಾಗಿದೆ.
ಇದನ್ನೂ ಓದಿ: SIR ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ
ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಕೃಷಿ ಇಲಾಖೆಯ ಅಧಿಕಾರಿಗಳು ನೀಡುವ ಸಲಹೆಗಳಂತೆ ಕೇವಲ ಮಳೆ ಆಶ್ರಿತ ಬೆಳೆಗಳನ್ನು ಮಾತ್ರ ಬೆಳೆಯುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಟಿ.ವೆಂಕಟೇಶ್ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

