Connect with us

    ಫೆಬ್ರವರಿ 20 ರಿಂದ ಒಂದು ತಿಂಗಳ ಕಾಲ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು | 12 ಸಾವಿರ ಹೆಕ್ಟೇರ್ ಕೃಷಿಭೂಮಿಯ ಬೇಸಿಗೆ ಹಂಗಾಮಿನ ಬೆಳೆಗೆ ನೀರಿನ ಭಾಗ್ಯ

    ವಾಣಿವಿಲಾಸ ಸಾಗರ

    ಮುಖ್ಯ ಸುದ್ದಿ

    ಫೆಬ್ರವರಿ 20 ರಿಂದ ಒಂದು ತಿಂಗಳ ಕಾಲ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು | 12 ಸಾವಿರ ಹೆಕ್ಟೇರ್ ಕೃಷಿಭೂಮಿಯ ಬೇಸಿಗೆ ಹಂಗಾಮಿನ ಬೆಳೆಗೆ ನೀರಿನ ಭಾಗ್ಯ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 19 FEBRUARY 2024

    ಚಿತ್ರದುರ್ಗ: ನಾಳೆಯಿಂದ (ಫೆಬ್ರವರಿ 20 ರಿಂದ ಮಾರ್ಚ್ 21 ರವರೆಗೆ) ಒಂದು ತಿಂಗಳ ಕಾಲ ವಾಣಿವಿಲಾಸ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

    ವಾಣಿವಿಲಾಸ ಸಾಗರ ಜಲಾಶಯದ ಮೇಲ್ಮಟ್ಟ, ಬಲನಾಲ, ಎಡನಾಲ ಅಚ್ಚುಕಟ್ಟು ಪ್ರದೇಶದ ಗ್ರಾಮಗಳ ಸುಮಾರು 12 ಸಾವಿರ ಹೆಕ್ಟೇರ್ ಕೃಷಿಭೂಮಿಗೆ 2023-24ನೇ ಸಾಲಿನ ಬೇಸಿಗೆ ಹಂಗಾಮಿಗೆ ಫೆ.20 ರಿಂದ ಒಂದು ತಿಂಗಳ ಕಾಲ ನೀರು ಹರಿಸಲು ಜಿಲ್ಲಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

    ಇದನ್ನೂ ಓದಿ: ಅಡಿಕೆ ಧಾರಣೆ | ಫೆಬ್ರವರಿ 19 | ಇಂದು ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

    ಈ ಕುರಿತು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

    ಜಿಲ್ಲಾ ನೀರಾವರಿ ಸಲಹಾ ಸಮಿತಿ ಹಿರಿಯೂರು ಭಾಗದ ಅಧಿಕಾರೇತರ ಸದಸ್ಯರು ಭಾಗವಹಿಸಿ, ಈ ಬಾರಿ ಭೀಕರ ಬರಗಾಲ ಎದುರಾಗಿದೆ. ವಿ.ವಿ.ಸಾಗರ ಅಚ್ಚುಕಟ್ಟು ಪ್ರದೇಶದಲ್ಲಿ ತೋಟಗಳು, ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಬೊರವೆಲ್‍ಗಳು ಬತ್ತಿ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೂ ತೊಂದರೆಯಾಗುತ್ತಿದೆ. ತಕ್ಷಣವೇ ವಿ.ವಿ.ಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹದಲ್ಲಿ ಬೇಸಿಗೆ ಹಂಗಾಮಿಗೆ ಕನಿಷ್ಠ 40 ದಿನಗಳ ನಾಲೆಗಳ ಮೂಲಕ ಹರಿಸುವಂತೆ ಸಭೆಯಲ್ಲಿ ಬೇಡಿಕೆಯನ್ನಿಟ್ಟರು.

    ಇದನ್ನೂ ಓದಿ: ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವುದು ಹೇಗೆ

    ಅಚ್ಚುಕಟ್ಟು ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಬಾಳೆಗಳ ಜೊತೆಗೆ ರೈತರು ಕೃಷಿ ಬೆಳೆಗಳಾದ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ, ರಾಗಿ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದಾರೆ.

    ಸದರಿ ಬೆಳೆಗಳು ಬೆಳವಣಿಗೆ ಹಂತದಲ್ಲಿ ಇದ್ದು ಬೇಸಿಗೆ ತಾಪಮಾನಕ್ಕೆ ಸಿಲುಕಿ ನಷ್ಟ ಹೊಂದಬಹುದು. ಆದ್ದರಿಂದ ಕೂಡಲೇ ವಿ.ವಿ.ಸಾಗರ ಜಲಾಶಯದಿಂದ ನೀರು ಹರಿಸುವಂತೆ ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.

    ಎಷ್ಟಿದೆ ಸದ್ಯ ಜಲಾಶಯ ಮಟ್ಟ:

    ಜಲಾಶಯದ ಸಂಗ್ರಹಣಾ ಸಾಮಥ್ರ್ಯ 30.42 ಟಿ.ಎಂ.ಸಿ ಗಳಾಗಿದೆ. ಇದರಲ್ಲಿ 1.87 ಟಿ.ಎಂ.ಸಿ ನೀರು ಬಳಕೆಗೆ ಬರುವುದಿಲ್ಲ. 28.55 ಟಿ.ಎಂ.ಸಿ ನೀರು ಮಾತ್ರ ಬಳಸಬಹುದು. ಪ್ರಸ್ತುತ ಜಲಾಶಯದಲ್ಲಿ 117.50 ಅಡಿ ನೀರಿನ ಎತ್ತರದ ಮಟ್ಟವಿದ್ದು, 18.59 ಟಿ.ಎಂ.ಸಿ ಸಂಗ್ರಹಣೆಯಿದೆ. ಹಿರಿಯೂರು, ಚಿತ್ರದುರ್ಗ ನಗರದ ಪ್ರದೇಶಗಳು, ಚಳ್ಳಕೆರೆ ಪಟ್ಟಣ ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿರುವ ವಿವಿಧ ಸಂಶೋಧನಾ ಕೇಂದ್ರಗಳು ಹಾಗೂ 18 ಹಳ್ಳಿಗಳಿಗೆ ನಿತ್ಯ 40 ಎಂ.ಎಲ್.ಡಿ ನೀರು ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಬೇಸಿಗೆ ಬೆಳೆಗಳಿಗೆ 30 ದಿನಗಳ ಕಾಲ ನೀರು ಹರಿಸಿದರೆ 1.40 ಟಿ.ಎಂ.ಸಿ ನೀರು ಬೇಕಾಗುತ್ತದೆ. ಸೂರ್ಯನ ಶಾಖಕ್ಕೆ ಬೇಸಿಗೆ ಅಂತ್ಯದ ವೇಳೆಗೆ 0.354 ಟಿ.ಎಂ.ಸಿ ನೀರು ಆವಿಯಾಗುವ ಸಂಭವಿದೆ. ಒಟ್ಟು 1.965 ಟಿ.ಎಂ.ಸಿ ನೀರಿನ ಬಳಕೆಯ ನಂತರ, ಜಲಾಶಯದಲ್ಲಿ 16.625 ಟಿ.ಎಂ.ಸಿ ನೀರು ಉಳಿಯಲಿದ್ದು, ನೀರನ ಮಟ್ಟ 114.40 ಅಡಿಗೆ ತಲುಪಲಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಹಿರಿಯರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಾರಿಕೇರ ಚಂದ್ರಪ್ಪ ಸಭೆಯಲ್ಲಿ ಮಾಹಿತಿ ನೀಡಿದರು.

    ಇದನ್ನೂ ಓದಿ: ಸರ್ಕಾರಿ ಮೆಡಿಕಲ್ ಕಾಲೇಜಿಗೆ 500 ಕೋಟಿ ಮಂಜೂರು ಮಾಡಿದ್ದು ಬೊಮ್ಮಾಯಿ ಸರ್ಕಾರ

    ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಫೆ.20 ರಿಂದ ಅಚ್ಚಕಟ್ಟು ಪ್ರದೇಶದಲ್ಲಿ ಬೇಸಿಗೆ ಬೆಳೆ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಇದರ ಜೊತೆಯಲ್ಲಿ ಈಗಾಗಲೇ ಬರಗಾಲಕ್ಕೆ ತುತ್ತಾದ ಹಿರಿಯೂರು ತಾಲ್ಲೂಕಿನ 38 ಹಳ್ಳಿಗಳಲ್ಲಿ ಜಲಾಶಯದ ನೀರು ಹರಿಸುವುದರಿಂದ ಅಂತರ್ಜಲ ಅಭಿವೃದ್ಧಿಯಾಗಲಿದೆ. ಜನಮೀನುಗಳಿಗೆ ನೀರು ಹಾಯಿಸುವುದರಿಂದ ಜಾನುವಾರುಗಳಿಗೂ ಕುಡಿಯುವ ನೀರು ದೊರಕಲಿದೆ ಎಂದರು.

    ಇದನ್ನೂ ಓದಿ: ವಿವಿ ಸಾಗರದಿಂದ 30 ಹಳ್ಳಿಗಳಿಗೆ ಕುಡಿಯುವ ನೀರು

    ಸಭೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ಶಾಸಕ ಟಿ.ರಘುಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ನೂತನ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ, ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ವಿಶ್ವೇಶ್ವರಯ್ಯ ಜಲ ನಿಗಮದ ಚಿತ್ರದುರ್ಗ ವಲಯ ಮುಖ್ಯ ಇಂಜಿನಿಯರ್ ಶಿವಪ್ರಕಾಶ್.ಕೆ.ಎಂ, ಸಲಹಾ ಸಮಿತಿ ಸದಸ್ಯರಾದ ಸಿ.ಎನ್.ಸುಂದರಂ, ಪಿ.ಕೆ.ಸುಂದರೇಶ್, ವೈ.ನಾಗರಾಜು, ಆಸಿಫ್ ಅಲಿ, ಎನ್.ಅನಿಲ್‍ಕುಮಾರ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top