
CHITRADURGA NEWS | 15 MARCH 2024
ಚಿತ್ರದುರ್ಗ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದ್ದು, ಕೂಲಿ ಕೆಲಸ ಅರಸಿಕೊಂಡು, ಯಾರೂ ಕೂಡ ಗುಳೇ ಹೋಗಬೇಡಿ, ನರೇಗಾ ಯೋಜನೆಯಡಿ ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ಕೂಲಿ ಕೆಲಸ ಕೊಟ್ಟು, ಸಕಾಲದಲ್ಲಿಯೇ ಕೂಲಿ ಹಣ ನೀಡುತ್ತೇವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಹೇಳಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್
ಹೊಳಲ್ಕೆರೆ ತಾಲ್ಲೂಕು ಹಿರೇ ಎಮ್ಮಿಗನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಲ್ಯಾಣಿ ಅಭಿವೃದ್ಧಿ, ಗ್ರಾಮೀಣ ಉದ್ಯಾನವನ, ಚರಂಡಿ, ರಸ್ತೆ ಕಾಮಗಾರಿಗಳನ್ನು ಗುರುವಾರ ವೀಕ್ಷಿಸಿ, ಬಳಿಕ ಅವರು ಮಾತನಾಡಿದರು.
ಮಳೆಯ ಕೊರತೆಯಿಂದಾಗಿ ಈ ಬಾರಿ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಈಗಾಗಲೆ ನರೇಗಾ ಯೋಜನೆಯಡಿ ಕೂಲಿ ಆಧಾರಿತ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಂಡಿದ್ದೇವೆ.
ಇದನ್ನೂ ಓದಿ: ರಸಾಯನಶಾಸ್ತ್ರದಲ್ಲಿ ಪಿಎಚ್‍ಡಿ ಪಡೆದ ಈ.ವಿಶಾಲ
ಉದ್ಯೋಗವನ್ನು ಅರಸಿಕೊಂಡು ಯಾರೂ ಕೂಡ ಗುಳೇ ಹೋಗಬಾರದು, ತಮ್ಮ ತಮ್ಮ ಗ್ರಾಮಗಳಲ್ಲಿಯೇ ನರೇಗಾದಡಿ ನೀಡುವ ಉದ್ಯೋಗವನ್ನು ನೀಡುತ್ತೇವೆ. ಕೆಲಸ ಅಗತ್ಯವಿರುವವರು ಕೂಡಲೆ ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ತಿಳಿಸಬೇಕು.
ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ಕೂಲಿ ಕೆಲಸ ನೀಡುತ್ತೇವೆ, ಅಲ್ಲದೆ ಸಕಾಲಕ್ಕೆ ಕೂಲಿ ಹಣವನ್ನು ಕೂಡ ಪಾವತಿಸಲಾಗುವುದು. ಗ್ರಾಮೀಣ ಭಾಗದ ಮಹಿಳಾ ಕೂಲಿಕಾರರು ಹೆಚ್ಚು ಹೆಚ್ಚು ನರೇಗಾ ಯೋಜನೆಯ ಸದ್ಬಳಕೆ ಮಾಡಿಕೊಂಡು, ಬರ ಪರಿಸ್ಥಿತಿಯಲ್ಲಿಯೇ ಆರ್ಥಿಕವಾಗಿ ಸದೃಢರಾಗಬೇಕು. ಅಧಿಕಾರಿಗಳು ನರೇಗಾ ಯೋಜನೆ ಅನುಷ್ಠಾನಗೊಳಿಸುವಾಗ 60 : 40 ಅನುಪಾತವನ್ನು ತಪ್ಪದೆ ಪಾಲಿಸಬೇಕು, ಈ ಮೂಲಕ ಇನ್ನೂ ಹೆಚ್ಚು ಉತ್ತಮ ಗುಣಮಟ್ಟದ ಆಸ್ತಿಗಳ ಸೃಜನೆಯನ್ನು ಮಾಡಬೇಕು ಎಂದು ಸಿಇಒ ಸೋಮಶೇಖರ್ ಹೇಳಿದರು.
ಇದನ್ನೂ ಓದಿ: ಬ್ಯಾಂಕ್‍ಗಳು ಬಡವರ ಹೆಬ್ಬಾಗಿಲಾದಾಗ ಮಾತ್ರ ದೇಶದಲ್ಲಿ ಪರಿವರ್ತನೆಯಾಗಲು ಸಾಧ್ಯ
ನರೇಗಾ ಯೋಜನೆಯಡಿ ನಿರ್ವಹಿಸುತ್ತಿರುವ ಕೂಸಿನ ಮನೆಗೆ ಭೇಟಿ ನೀಡಿದ ಅವರು, ಮಕ್ಕಳಿಗೆ ಸರಿಯಾದ ಸಮಯಕ್ಕೆ ಆಹಾರ ವಿತರಣೆ ಆಗಬೇಕು, ಗುಣಮಟ್ಟದ ಆಹಾರ ಮತ್ತು ಕುಡಿಯುವ ನೀರನ್ನು ಪೂರೈಸಬೇಕು, ಮತ್ತು ಮಕ್ಕಳ ಆರೋಗ್ಯವನ್ನು ತುಂಬಾ ಜಾಗರೂಕತೆಯಿಂದ ಕಾಳಜಿ ವಹಿಸಿ ನೋಡಿಕೊಳ್ಳುವಂತೆ ಕೂಸಿನ ಮನೆ ನಿರ್ವಾಹಕರಿಗೆ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 7 ಗ್ರಾಮಗಳಿದ್ದು ಕಡೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಸಿಇಒ ಅವರ ಗಮನಕ್ಕೆ ತಂದರು. ಸ್ಪಂದಿಸಿದ ಸಿಇಒ ಅವರು, ಅತ್ಯಂತ ತುರ್ತಾಗಿ ಸ್ಥಳೀಯ ಖಾಸಗಿ ಬೋರ್‍ವೇಲ್ ಬಾಡಿಗೆಗೆ ಪಡೆದು ಸಾರ್ವಜನಿಕರಿಗೆ ಕುಡಿಯುವ ನೀರನ ಸಮಸ್ಯೆಯನ್ನು ಪರಿಹರಿಸುವಂತೆ ಸೂಚಿಸಿದರು.
ಇದನ್ನೂ ಓದಿ: ದುರ್ಗದ ಸೊಸೆ ದಾವಣಗೆರೆ ಬಿಜೆಪಿ ಅಭ್ಯರ್ಥಿ
ಹಿರೇ ಎಮ್ಮಿಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 7000 ಸಾವಿರ ಜನಸಂಖ್ಯೆಯಿದ್ದು, 17 ಗ್ರಾಮ ಪಂಚಾಯಿತಿಯ ಸದಸ್ಯರಿದ್ದಾರೆ. ಹೀಗಾಗಿ ಈ ಗ್ರಾಮ ಪಂಚಾಯಿತಿಯನ್ನು ಗ್ರೇಡ್ 1 ಗ್ರಾಮ ಪಂಚಾಯಿತಿಯನ್ನಾಗಿ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
ಗ್ರಾ.ಪಂ. ಕಟ್ಟಡ 30 ವರ್ಷ ಹಳೆಯದಾಗಿದ್ದು, ಶಿಥಿಲವಾಗಿದೆ, ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸದಸ್ಯರು ಮನವಿ ಮಾಡಿದರು, ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ, ಸದಸ್ಯರ ಶಿಫಾರಸ್ಸಿನಂತೆ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು, ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ 20 ಲಕ್ಷ ರೂ. ಅನುದಾನ ಬಳಕೆಗೆ ಅವಕಾಶವಿದ್ದು, ಕ್ರಿಯಾ ಯೋಜನೆ ರೂಪಿಸಿ, ಅನುಮೋದನೆ ಪಡೆದು, ಹೊಸ ಕಟ್ಟಡ ನಿರ್ಮಿಸಿಕೊಳ್ಳಲು ಸೂಚಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಎಂಪಿ ಟಿಕೇಟ್ ಸಸ್ಪೆನ್ಸ್ | ಕಗ್ಗಂಟಾಯ್ತು ಅಭ್ಯರ್ಥಿ ಆಯ್ಕೆ ವಿಚಾರ
ಗ್ರಾಮ ಪಂಚಾಯಿತಿಯು ಕರವಸೂಲಿಯಲ್ಲಿ ಅತ್ಯಂತ ಹಿಂದುಳಿದಿದ್ದು,ಅರೇ ಮಲೆನಾಡಿನ ಭಾಗವಾಗಿರುವುದರಿಂದ ಅತಿ ಹೆಚ್ಚಿನ ವಸೂಲಾತಿಯನ್ನು ಮಾಡಿ, ಗ್ರಾಮ ಪಂಚಾಯಿತಿಯ ಸಂಪನ್ಮೂಲ ಹೆಚ್ಚು ಮಾಡಿಕೊಂಡು ಗ್ರಾಮಗಳ ಅಭಿವೃದ್ದಿ ಮಾಡುವಂತೆ ಸೂಚನೆ ನೀಡಿದರು.
ಗ್ರಾಮದ ಸರ್ಕಾರಿ ಫ್ರೌಢಶಾಲೆಗೆ ಭೇಟಿ ನೀಡಿ ಅಲ್ಲಿನ ಶಿಕ್ಷಕರೊಂದಿಗೆ ಮತ್ತು ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೊಂದಿಗೆ ವಾರ್ಷಿಕ ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ ಸಂವಾದ ನಡೆಸಿದ ಅವರು, ಮಕ್ಕಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಏಕಾಗ್ರತೆಯಿಂದ ವ್ಯಾಸಂಗ ಮಾಡಿ, ಉತ್ತಮ ಅಂಕಗಳನ್ನು ಪಡೆದು ತಮ್ಮ ಶಾಲೆಗೆ ಹಾಗೂ ತಂದೆ-ತಾಯಿಯವರಿಗೆ ಮತ್ತು ಜಿಲ್ಲೆಗೆ ಕೀರ್ತಿ ತರುವಂತೆ ಸಲಹೆ ನೀಡಿದರು.
ಇದನ್ನೂ ಓದಿ: ಕಾಂಗ್ರೆಸ್ ಸೇರ್ತಿರಾ ಅಂದಾಕ್ಷಣ ಕೆಂಡಾಮಂಡಲರಾದ ಸಚಿವ ನಾರಾಯಣಸ್ವಾಮಿ
ಹಿರೇ ಎಮ್ಮಿಗನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಪ್ರಕಾಶ್ ಎಸ್. ಗ್ರಾ.ಪಂ. ಉಪಾಧ್ಯಕ್ಷರು ಹಾಗು ಸರ್ವ ಸದಸ್ಯರೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸ್ಥಳೀಯ ಸಮಸ್ಯೆಗಳ ಕುರಿತು ಇದೇ ಸಂದರ್ಭದಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಉಪ ಕಾರ್ಯದರ್ಶಿ ತಿಮ್ಮಪ್ಪ, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಶಿವಪ್ರಕಾಶ್, ಸೇರಿದಂತೆ ನರೇಗಾ ಸಹಾಯಕ ನಿರ್ದೇಶಕರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಭೆಯಲ್ಲಿ ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
