CHITRADURGA NEWS | 01 AUGUST 2026
ಚಿತ್ರದುರ್ಗ: ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯವಾಗಲು ಅವಕಾಶ ನೀಡಬಾರದು. ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರಾಜ್ಯದ ಹಿತ ಕಾಪಾಡುವ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಪಿ. ಕೋದಂಡರಾಮಯ್ಯ ಆಗ್ರಹಿಸಿದರು.
ಇದನ್ನೂ ಓದಿ: ಸಾಮರ್ಥ್ಯವಂತರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ | ರಿಪುನ್ ಬೋರಾ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮೀಸಲಿಡಲಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ನಿರ್ದೇಶನ ಜನವಿರೋಧಿಯಾಗಿದೆ ಎಂದು ಆರೋಪಿಸಿದರು.
ರಾಜ್ಯದ ಹಿತ ರಕ್ಷಣೆಗಾಗಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಂಪೂರ್ಣ ಬೆಂಬಲ ನೀಡಲಿದೆ ಎಂದ ಅವರು, ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದ್ದು, ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅಗತ್ಯ ಅನುದಾನ ಮತ್ತು ಅನುಮತಿ ನೀಡಬೇಕು. ಯೋಜನೆಗೆ ಘೋಷಿಸಿರುವ ₹5,300 ಕೋಟಿ ಬಿಡುಗಡೆ ಮಾಡುವುದರ ಜೊತೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ ನೀಡುವಂತೆ ಆಗ್ರಹಿಸಿದರು.
ಇದನ್ನೂ ಓದಿ: ಪ್ರತಿ ತಾಲ್ಲೂಕಿನಲ್ಲಿ ರೈತರ ಸಭೆ ನಡೆಸಿ ಬಿತ್ತನೆ ವೈಫಲ್ಯ ವಿಮೆಗೆ ಕ್ರಮ ಕೈಗೊಳ್ಳಿ | ಜಿಲ್ಲಾಧಿಕಾರಿ
ರಾಜ್ಯವನ್ನು ಪ್ರತಿನಿಧಿಸುವ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಪಕ್ಷಾತೀತವಾಗಿ ರಾಜ್ಯದ ಹಿತರಕ್ಷಣೆಗಾಗಿ ಸಂಸತ್ನಲ್ಲಿ ಒಂದೇ ಧ್ವನಿಯಲ್ಲಿ ಮಾತನಾಡಬೇಕು. ತಮಿಳುನಾಡಿನಂತೆ ಕರ್ನಾಟಕದ ರಾಜಕೀಯ ಪಕ್ಷಗಳೂ ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಒಗ್ಗಟ್ಟಿನ ನಿಲುವು ತಾಳಬೇಕು ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕರ್ನಾಟಕದ ಜನರ ಹಿತವನ್ನು ಕಾಪಾಡುವ ನಿರ್ಧಾರ ಕೈಗೊಳ್ಳಬೇಕು. ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕಾನೂನು ಹಾಗೂ ರಾಜತಾಂತ್ರಿಕ ಹೋರಾಟವನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಬಂಜಗೆರೆ ಜಯಪ್ರಕಾಶ್, ಸಂಚಾಲಕರಾದ ಚಳ್ಳಕೆರೆ ಬಸವರಾಜ್, ನರೇನಹಳ್ಳಿ ಅರುಣ್ಕುಮಾರ್, ಜೋಗಿಮಟ್ಟಿ ಮಹೇಶಬಾಬು ಹಾಗೂ ಮುಖಂಡರಾದ ಈಚಘಟ್ಟ ಸಿದ್ದವೀರಪ್ಪ, ಬೇಡರರೆಡ್ಡಿಹಳ್ಳಿ ಬಸವರೆಡ್ಡಿ, ಆರ್. ಶೇಷಣ್ಣಕುಮಾರ್, ಕೂನಿಕೆರೆ ರಾಮಣ್ಣ, ಕೆ.ಟಿ. ತಿಪ್ಪೇಸ್ವಾಮಿ, ಲಕ್ಷ್ಮೀಕಾಂತ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

